ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ - ತ್ಯಾಜ್ಯ ವಸ್ತುಗಳಿಗೆ ಬೆಂಕಿ
🎬 Watch Now: Feature Video
Published : Nov 4, 2023, 10:43 AM IST
ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತಡರಾತ್ರಿ ಮತ್ತಿಕೆರೆ ಬಳಿ ನಡೆದಿದೆ. ಕಟ್ಟಡದ ಖಾಲಿ ಜಾಗದಲ್ಲಿ ಇರಿಸಲಾಗಿದ್ದ ತ್ಯಾಜ್ಯ ವಸ್ತುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.
ರಾಜಧಾನಿ ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯ ಮತ್ತಿಕೆರೆ ಸಿಗ್ನಲ್ ಬಳಿ ತಡರಾತ್ರಿ 1.30 ರ ಸುಮಾರಿಗೆ ಘಟನೆ ಜರುಗಿದೆ. ಕಟ್ಟಡದ ಗ್ರೌಂಡ್ ಫ್ಲೋರ್ನಲ್ಲಿ ತ್ಯಾಜ್ಯ ವಸ್ತುಗಳನ್ನು ಶೇಖರಣೆ ಮಾಡಲಾಗಿತ್ತು. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸಂಬಂಧ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕೋರಮಂಗಲದಲ್ಲಿ ಅಗ್ನಿ ಅವಘಡ : ರೆಸ್ಟೋರೆಂಟ್ ಸುಟ್ಟು ಕರಕಲು. . ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಯುವಕ