ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಹೊತ್ತಿ ಉರಿದ ಬಟ್ಟೆ ಅಂಗಡಿ - fire broke out in textile shop
🎬 Watch Now: Feature Video
Published : Oct 25, 2023, 1:40 PM IST
ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿರುವ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿದೆ. ಇಂದು ಮುಂಜಾನೆ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ತಂತಿಗೆ ಹಕ್ಕಿಯೊಂದು ತಗುಲಿ ಶಾರ್ಟ್ ಸರ್ಕ್ಯೂಟ್ ಆಗಿ ಅದರ ಬೆಂಕಿ ಕಿಡಿ ಬಟ್ಟೆ ಅಂಗಡಿಗೆ ತಗುಲಿದ್ದೇ ಬೆಂಕಿ ಅವಘಡ ಸಂಭವಿಸಲು ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗಿದೆ.
ಬೆಂಕಿ ಹೊತ್ತಿಕೊಂಡ ವೇಳೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ ನಾಲ್ಕೈದು ಕೆಲಸಗಾರರು ಅಂಗಡಿಯಲ್ಲಿ ಮಲಗಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಹೊರ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಅಗ್ನಿ ಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಷ್ಟೊತ್ತಿಗಾಗಲೇ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಅಗ್ನಿಗಾಹುತಿಯಾಗಿವೆ. ಇಡೀ ಬಟ್ಟೆ ಅಂಗಡಿ ಸಂಪೂರ್ಣ ಸುಟ್ಟ ಪರಿಣಾಮ ಪಕ್ಕದ ಹೊಟೆಲ್ಗೂ ಸಣ್ಣಪುಟ್ಟ ಹಾನಿಯಾಗಿದೆ ಎಂದು ಸಂತೆಬೆನ್ನೂರು ಗ್ರಾಪಂ ಸದಸ್ಯ ಆಸೀಪ್ ಮಾಹಿತಿ ನೀಡಿದರು.
ಇದನ್ನೂ ಓದಿ: ಕೋರಮಂಗಲದಲ್ಲಿ ಅಗ್ನಿ ಅವಘಡ : ರೆಸ್ಟೋರೆಂಟ್ ಸುಟ್ಟು ಕರಕಲು.. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಯುವಕ