ಎಲೆಕ್ಟ್ರಾನಿಕ್ಸ್ ಅಂಗಡಿ, ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆಯ ಮೇಲ್ಮಹಡಿಯಲ್ಲಿ ಅಗ್ನಿ ಅವಘಡ - ಈಟಿವಿ ಭಾರತ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17645683-thumbnail-4x3-yyyy.jpg)
ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನೀಚರ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೆಹಿಕಲ್ನ ಮಳಿಗೆಯ ಮೇಲಿನ ಮಹಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ಕೆನ್ನಾಲಿಗೆ ಹರಡಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳನ್ನು ದಾಸ್ತಾನು ಇರಿಸಲಾಗಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಸಂಶಯಿಸಲಾಗಿದೆ. ಕೊಮಾಕಿ ಕಂಪನಿಯ ಬ್ಯಾಟರಿ ಚಾಲಿತ ಸ್ಕೂಟರ್ನ ಬ್ಯಾಟರಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಇದನ್ನೂ ಓದಿ : ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ; ವಿವಿಧ ರಾಜ್ಯಗಳ ಸ್ಪರ್ಧಿಗಳು ಭಾಗಿ