ವಿದ್ಯುತ್​ ತಂತಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿ: 14 ಎಕರೆ ಕಬ್ಬು ಬೆಳೆ ಸರ್ವನಾಶ - 14 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ

🎬 Watch Now: Feature Video

thumbnail

By

Published : Dec 20, 2022, 1:34 PM IST

Updated : Feb 3, 2023, 8:36 PM IST

ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಕಾರಣ 14 ಎಕರೆ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರಿನ ಕುರುಬಾರಹುಂಡಿ ಗ್ರಾಮದಲ್ಲಿ‌ ನಡೆದಿದೆ. ಸುಬ್ರಮಣ್ಯ ಎಂಬುವರಿಗೆ ಸೇರಿದ 7 ಎಕರೆ ಹಾಗೂ ನಾಗ ಎಂಬುವರಿಗೆ ಸೇರಿದ 7 ಎಕರೆ ಕಬ್ಬು ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ವೇಗವಾಗಿ ಹರಡುತ್ತಿದ್ದ ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಹರಸಾಹಸಪಟ್ಟರು.
Last Updated : Feb 3, 2023, 8:36 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.