ರಾಮನಗರದಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ..ಭಯಬೇಡ ಎಂದ ಡಿಎಚ್​ಒ - ಐಸೋಲೇಶನ್

🎬 Watch Now: Feature Video

thumbnail

By ETV Bharat Karnataka Team

Published : Dec 19, 2023, 5:17 PM IST

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾಗಿದೆ. ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ನಡೆದ ಕೋವಿಡ್ ಸೋಂಕು ತಪಾಸಣೆ ವೇಳೆ ಒಬ್ಬ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಸೋಂಕು ಪತ್ತೆಯಾದ ನಿಟ್ಟಿನಲ್ಲಿ ವಿದ್ಯಾರ್ಥಿಯನ್ನು ಎರಡು ದಿನಗಳ ಕಾಲ ಐಸೋಲೇಶನ್​ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಯ ರಕ್ತ ಪರೀಕ್ಷೆ ವರದಿ ಬಂದ ನಂತರ ಹೆಚ್ಚಿನ ಮಾಹಿತಿ ದೊರೆಯಬೇಕಿದೆ ಎಂದು ರಾಮನಗರ ಡಿಎಚ್​ಒ ನಿರಂಜನ್ ಮಾಹಿತಿ ಕೊಟ್ಟಿದ್ದಾರೆ.

ಸರ್ಕಾರದಿಂದ ಮಾರ್ಗಸೂಚಿ : ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ಹಾಗೂ 60 ವರ್ಷದ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಸೇರಿದಂತೆ ಹಲವರು ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.  

ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕ್ರಿಸ್​ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನದಟ್ಟಣೆಯಿಂದಾಗಿ ಮತ್ತಷ್ಟು ಹೆಚ್ಚಳವಾಗುವ ಸಂಭವವಿದೆ. ಹಾಗಾಗಿ, ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿರುವ  ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ:  60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ಕೊರೊನಾ ರೂಪಾಂತರಿ ಬಗ್ಗೆ ಆತಂಕ ಬೇಡ: ದಿನೇಶ್ ಗುಂಡೂರಾವ್​

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.