ಡ್ರೈವಿಂಗ್ ನಲ್ಲಿರುವಾಗಲೇ ಚಾಲಕನಿಗೆ ಫಿಟ್ಸ್: ಪೆಟ್ರೋಲ್ ಪಂಪ್​ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ - fits attack while driver driving lorry

🎬 Watch Now: Feature Video

thumbnail

By

Published : Mar 9, 2023, 3:29 PM IST

Updated : Mar 9, 2023, 3:59 PM IST

ಬಂಟ್ವಾಳ (ದಕ್ಷಿಣ ಕನ್ನಡ) : ಲಾರಿ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಮೂರ್ಛೆ ರೋಗ (ಫಿಟ್ಸ್) ಬಾಧಿಸಿದ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್​ನಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಬಿ.ಸಿ ರೋಡ್​ನಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಬಿ.ಸಿ ರೋಡಿನ ಪೆಟ್ರೋಲ್ ಪಂಪ್​​ ಬಳಿ ಈ ಘಟನೆ ನಡೆದಿದೆ. ಲಾರಿ ಚಾಲಕನನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದ್ದು, ಆತನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೆಟ್ರೋಲ್ ಪಂಪ್​​ನಲ್ಲಿ ಪೆಟ್ರೋಲ್​ ಹಾಕಿಸಿಕೊಳ್ಳುತ್ತಿದ್ದ ರಿಟ್ಜ್​​ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ, ಬೈಕ್​ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇತರ ವಾಹನಗಳಿಗೂ ಡಿಕ್ಕಿ ಹೊಡೆದ ಲಾರಿ, ಕೊನೆಗೆ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ. ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಅಶ್ವತ್ಥ​ ನಾರಾಯಣ

Last Updated : Mar 9, 2023, 3:59 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.