ಕೋಲಾರದಲ್ಲಿ ಬಿಎಸ್‌ಎಫ್ ಸಿಬ್ಬಂದಿ ಮೇಲೆ ಜನರಿಂದ ಪುಷ್ಪವೃಷ್ಟಿ: ವಿಡಿಯೋ - BSF personnel in Kolar
🎬 Watch Now: Feature Video
ಕೋಲಾರ: ರಾಜ್ಯ ವಿಧಾನಸಭೆ ಚುನಾವಣೆ ರಂಗೇರಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುವ ಕೋಲಾರ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ವಿಪಕ್ಷ ನಾಯಕ ಇಲ್ಲಿ ಸ್ಪರ್ಧೆ ಮಾಡುತ್ತಾರೋ ಇಲ್ಲವೋ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಈ ಮಧ್ಯೆ ಜಿಲ್ಲೆಯಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಬಿಎಸ್‌ಎಫ್ ಸಿಬ್ಬಂದಿಯ ಮೇಲೆ ಸ್ಥಳೀಯರು ಪುಷ್ಪವೃಷ್ಟಿ ಮಾಡಿದ್ದಾರೆ.
ನಗರದ ರಸ್ತೆಗಳಲ್ಲಿ ಸಂಚರಿಸುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಮೇಲೆ ಎಲ್ಲ ಜನರೂ ಗೌರವಪೂರ್ವಕವಾಗಿ ಹೂವಿನ ದಳಗಳನ್ನು ಹಾಕಿದ್ದಾರೆ. ಇದಲ್ಲದೇ, ಬಾಲಕಿಯೊಬ್ಬಳು ಪ್ರತಿ ಯೋಧರಿಗೂ ಗುಲಾಬಿ ಹೂವನ್ನು ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೇಶ ಕಾಯುವ ಯೋಧರಿಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ ಎಂದು ಜನರು ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿಕೊಂಡಿದ್ದರು. ವರುಣಾದಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಇಲ್ಲಿಂದಲೂ ಅವರು ಸ್ಪರ್ಧೆ ಮಾಡುವ ಆಸಕ್ತಿ ಹೊಂದಿದ್ದಾರೆ. ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಆಗುವ ನಿರೀಕ್ಷೆ ಹೊಂದಿದ್ದಾರೆ.
ಓದಿ: ನಟ ಸುದೀಪ್ ಬಿಜೆಪಿ ಸೇರ್ಪಡೆ ಕುರಿತು ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದ ಸಿಎಂ.. ಮಾಹಿತಿ ಇಲ್ಲ ಎಂದ ರಾಮುಲು