Chian snaching: ವೃದ್ಧೆಯನ್ನು ಹಿಂಬಾಲಿಸಿ ಸರಗಳ್ಳತನ; ಬೆಂಗಳೂರಿನಲ್ಲಿ ನಡೆದ ಘಟನೆಯ ಸಿಸಿಟಿವಿ ದೃಶ್ಯ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
ಬೆಂಗಳೂರು : ನಗರದಲ್ಲಿ ವೃದ್ಧರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುವ ಪ್ರಕರಣಗಳು ಮುಂದುವರೆದಿವೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿದ ಖದೀಮನೊಬ್ಬ ಸರ ಕಸಿದುಕೊಂಡು ಪರಾರಿಯಾದ ಘಟನೆ ಎನ್ಆರ್ಐ ಬಡಾವಣೆಯ 5ನೇ ಕ್ರಾಸ್ನ ಮಾರುತಿ ಪ್ರತೀಕ್ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 9ರ ರಾತ್ರಿ 8.30ರ ವೇಳೆ ಮೊಮ್ಮಗಳ ಜೊತೆ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಫಾಲೋ ಮಾಡಿದ ಸರಗಳ್ಳ, ಹಿಂಬದಿಯಿಂದ ಕೈಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಳೆದಿದ್ದಾನೆ. ಸರ ಎಳೆದ ರಭಸಕ್ಕೆ ವೃದ್ದೆ ಕೆಳಗೆ ಬಿದ್ದಿದ್ದಾರೆ. ಖದೀಮ ಸ್ಥಳದಿಂದ ಪರಾರಿಯಾಗಿದ್ದಾನೆ.
ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸರಗಳ್ಳನಿಗೆ ಶೋಧ ನಡೆಸುತ್ತಿದ್ದಾರೆ. ರಾಜ್ಯ ರಾಜಧಾನಿದಲ್ಲಿ ಸರಗಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಪೊಲೀಸರು ಅನೇಕ ಕ್ರಮಗಳನ್ನು ಕೈಗೊಂಡರೂ ಪ್ರಕರಣಗಳು ನಡೆಯುತ್ತಿವೆ.
ಇದನ್ನೂ ಓದಿ : ರಾಜಧಾನಿಯಲ್ಲಿ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸರಗಳ್ಳರ ಬಂಧನ