ವಿದೇಶಗಳು ಭಾರತವನ್ನ ಛಿದ್ರಗೊಳಿಸಲು ಕಾಯುತ್ತಿರುವ ಸಂದರ್ಭದಲ್ಲಿ ಏಕತೆ ಮುಖ್ಯ: ರಾಮದಾಸ್​

🎬 Watch Now: Feature Video

thumbnail

By ETV Bharat Karnataka Team

Published : Jan 10, 2024, 3:45 PM IST

ಹುಬ್ಬಳ್ಳಿ:  ಚೀನಾ, ಪಾಕಿಸ್ತಾನ, ಮಾಲ್ಡೀವ್ಸ್ ಸೇರಿದಂತೆ ಸುತ್ತಮುತ್ತ ಇರುವ ವಿದೇಶಿ ವ್ಯವಸ್ಥೆಗಳು ಭಾರತವನ್ನು ಛಿದ್ರ ಛಿದ್ರಗೊಳಿಸಲು ಕಾಯುತ್ತಿರುವ ಸಂದರ್ಭದಲ್ಲಿ ಏಕತೆ ಬಹಳ ಮುಖ್ಯ ಎಂದು ಮಾಜಿ ಸಚಿವ ಎಸ್​ ಎ ರಾಮದಾಸ್​ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂತಹ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗದಿದ್ದರೆ ಏನಾಗಬಹುದು? ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಮಯದಲ್ಲಿ ಏಕತೆ ಬಹಳ ಮುಖ್ಯವೇ ಹೊರತು, ನಮ್ಮ ವಿಚಾರ, ನಮ್ಮ ಅಧಿಕಾರ ಅಲ್ಲ. ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಬಹಳಷ್ಟು ಕಡಿಮೆಯಾಗಿವೆ. ಅದಕ್ಕಿಂತ ಮುಂಚೆ ಯಾವ ಸ್ಥಿತಿ ಇತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಶ್ಮೀರದ ಪರಿಸ್ಥಿತಿ ಏನಾಗಿದೆ ಅಂತ ನೋಡಿದ್ದೀರಿ, ಇಂದು ಕಾಶ್ಮೀರವನ್ನು ನೋಡಿ ಆನಂದ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಪಿಎಂ ವಿಶ್ವಕರ್ಮ ಯೋಜನೆ ಅಡಿ ಕರ್ನಾಟಕದಿಂದ ಸಲ್ಲಿಸಿರುವ ಅರ್ಜಿ ರಾಷ್ಟ್ರದಲ್ಲಿಯೇ ಅತ್ಯಧಿಕವಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಶೀಘ್ರದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಿ, ಯೋಜನೆ ಜಾರಿಗೊಳಿಸಲಿದೆ. ಪಿಎಂ ಸ್ವನಿಧಿ ಯೋಜನೆಯನ್ನು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಅತ್ಯುತ್ತಮವಾಗಿ ಜಾರಿಗೊಳಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರದ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಗಣರಾಜ್ಯೋತ್ಸದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಕೋರಿ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.