ಚಿಕ್ಕಮಗಳೂರು: ಮತ್ತೊಂದು ಪುಂಡಾನೆ ಸೆರೆಹಿಡಿದ ಅರಣ್ಯ ಇಲಾಖೆ - ಮೂಡಿಗೆರೆ ತಾಲೂಕಿನ ತಳವಾರ ಗ್ರಾಮ
🎬 Watch Now: Feature Video
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಮೂವರನ್ನು ಕಾಡನೆಗಳು ಬಲಿ ತೆಗೆದುಕೊಂಡಿದ್ದವು. ಈ ರೀತಿ ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಐದು ದಿನಗಳ ಹಿಂದೆ ಮೊದಲ ಒಂದು ಪುಂಡಾನೆಯನ್ನು ಕುಂಡ್ರ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದರು. ಇದೀಗ 2 ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದ್ದು, 5 ಸಾಕಾನೆಗಳಿಂದ ಸತತ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುತ್ತಿದೆ. ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಸದ್ಯ ಎರಡು ಪುಂಡಾನೆ ಸೆರೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನರು ನಿಟ್ಟಿಸಿರು ಬಿಟ್ಟಿದ್ದಾರೆ.
Last Updated : Feb 3, 2023, 8:34 PM IST