ಕೆಂಪೇಗೌಡ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಿದ ಹೆಚ್​ಡಿಕೆ - ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

🎬 Watch Now: Feature Video

thumbnail

By ETV Bharat Karnataka Team

Published : Oct 28, 2023, 11:26 AM IST

ದೇವನಹಳ್ಳಿ (ಬೆಂಗಳೂರು) : ಜೆಡಿಎಸ್​ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದರು. ಹೆಚ್​​ ಡಿ ಕುಮಾರಸ್ವಾಮಿ ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿಯವರೂ ಜೊತೆಯಲ್ಲಿ ದುಬೈಗೆ ತೆರಳಿದರು.

ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹೆಚ್​ಡಿಕೆ, 10.30ರ ಎಮಿರೇಟ್ಸ್ ವಿಮಾನದಲ್ಲಿ ದುಬೈಗೆ ಪ್ರಯಾಣ ಬೆಳೆಸಿದರು. ದುಬೈಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬೈನಲ್ಲಿ ಕೆಂಪೇಗೌಡರ ಸಂಘದ ಸಭೆ ಇದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದೇನೆ. ಬೇರೇನೂ ವಿಷಯ ಇಲ್ಲ ಎಂದು ಹೇಳಿದರು. ಇದಕ್ಕೂ ಮುನ್ನ ಹೆಚ್​ಡಿಕೆ ರಷ್ಯಾ ಪ್ರವಾಸ ಕೈಗೊಂಡಿದ್ದರು.

ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಲ್ಲಿನ ವಿಮಾನ ನಿಲ್ದಾಣದಿಂದಲೇ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದರು. ಈಗಾಗಲೇ ತೆಲಂಗಾಣ ಚುನಾವಣೆ ಘೋಷಣೆ ಆಗಿರುವ ಹಿನ್ನಲೆ ಡಿಕೆ ಶಿವಕುಮಾರ್​​ ಅವರು 9.15ರ ಇಂಡಿಗೋ ವಿಮಾನದಲ್ಲಿ ಹೈದರಾಬಾದ್​ ತೆರಳಿದರು.

ಇದನ್ನೂ ಓದಿ : ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿಕೆ ಶಿವಕುಮಾರ್

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.