ಆಪರೇಷನ್ ಹಸ್ತ ಟೀಕೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು? - ಈಟಿವಿ ಭಾರತ್​ ಕನ್ನಡ ನ್ಯೂಸ್

🎬 Watch Now: Feature Video

thumbnail

By

Published : Aug 18, 2023, 6:11 PM IST

ದೊಡ್ಡಬಳ್ಳಾಪುರ : ಅಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಬಹುದೇ ಹೊರತು, ಅವಕಾಶವಾದಿಗಳಾಗಿ ಸೇರ್ಪಡೆಗೆ ಮುಂದಾದರೆ ಅಂಥವರಿಗೆ ಯಾವುದೇ ಅವಕಾಶ ದೊರಕುವುದಿಲ್ಲ. ಕಾಂಗ್ರೆಸ್​ ಪಕ್ಷಕ್ಕೂ ಯಾವುದೇ ಶಕ್ತಿ ಬರುವುದಿಲ್ಲ ಎಂದರು. 

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಸಂಪರ್ಕದಲ್ಲಿ ಯಾರೂ ಇಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿ ಯಾರಿದ್ದಾರೆ ಎಂಬುದು ಕೂಡ ನನಗೆ ತಿಳಿದಿಲ್ಲ ಎಂದರು.

ಬಳಿಕ ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಪ್ರತಿಕ್ರಿಯಿಸಿ, ಯತ್ನಾಳ್‌ ಅವರಿಗೆ ಈ ಮುಂಚೆಯಿಂದಲೂ ಮುಖ್ಯಮಂತ್ರಿಯಾಗುವ ಆತುರವಿದೆ. ಆದರೆ ಅವರು ಈ ಜನ್ಮದಲ್ಲಿ ಸಿಎಂ ಆಗಲ್ಲ. ಇಷ್ಟಕ್ಕೂ ಅವರನ್ನು ಅವರ ಪಕ್ಷದವರೇ ಗಂಭೀರವಾಗಿ ಪರಿಗಣಿಸಿಲ್ಲ. ಇನ್ನೂ ನಾವು ಪರಿಗಣಿಸಲು ಸಾಧ್ಯವೇ?. ಲೋಕಸಭೆ ಚುನಾವಣೆ ನಾಳೆಯೇ ಬಂದರೂ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಪ್ರಧಾನಿ ಮೋದಿಯನ್ನು ಸೋಲಿಸಲು ಇಂಡಿಯಾ ಹೆಸರಲ್ಲಿ ಒಕ್ಕೂಟ ರಚಿಸಲಾಗಿದ್ದು, ಎಲ್ಲರೂ ಒಂದಾಗಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.    

ಇದನ್ನೂ ಓದಿ : ಯಾರೂ ಪಕ್ಷ ಬಿಟ್ಟು ಹೋಗಲ್ಲ, ಮೈತ್ರಿ ಉಳಿಸಿಕೊಳ್ಳುವಲ್ಲಿ‌ ಕಾಂಗ್ರೆಸ್ ವಿಫಲ: ಪ್ರಹ್ಲಾದ್ ಜೋಶಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.