ಕಾರು - ಟಾಟಾ ಏಸ್ ನಡುವೆ ಅಪಘಾತ: ನಾಲ್ವರ ಸಾವು, ಹಲವರಿಗೆ ಗಾಯ - ಈಟಿವಿ ಭಾರತ ಕನ್ನಡ
🎬 Watch Now: Feature Video
ಕೋಣಸೀಮಾ (ಆಂಧ್ರಪ್ರದೇಶ): ಕೋಣಸೀಮಾ ಜಿಲ್ಲೆಯಲ್ಲಿ ಆಲಮೂರು ಮಂಡಲದ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಆಂಧ್ರದ ರಂಪಚೋಡವರಂ ಮೂಲದ 10 ಜನ ಟಾಟಾ ಮ್ಯಾಜಿಕ್ ವಾಹನದಲ್ಲಿ ವಿಶಾಖಪಟ್ಟಣದಿಂದ ಭೀಮಾವರಂ ಕಡೆಗೆ ಹೋಗುತ್ತಿದ್ದ ವೇಳೆ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವ್ಯಾನ್‌ನಲ್ಲಿದ್ದ ಮೂವರು ಹಾಗೂ ಕಾರಿನಲ್ಲಿದ್ದ ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಜಮಹೇಂದ್ರವರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಲಾರಿ ಕಾರು ನಡುವೆ ಅಪಘಾತ ಇಬ್ಬರ ಸಾವು: ತುಮಕೂರಿನಲ್ಲಿ ಎರಡು ದಿನಗಳ ಹಿಂದೆ ಲಾರಿ ಕಾರು ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಅಪಘಾತ ಸಂಭವಿಸಿತ್ತು. ಮೃತರನ್ನು ದಾವಣೆಗೆರೆ ಮೂಲದ ಶಿವು ನಾಯಕ್, ಕೊಡಿಗೇನಹಳ್ಳಿಯ ಪರಮೇಶ್ ಎಂದು ತಿಳಿದು ಬಂದಿತ್ತು.
ಇದನ್ನೂ ಓದಿ: ತುಮಕೂರು: ಲಾರಿ–ಕಾರು ನಡುವೆ ಡಿಕ್ಕಿ.. ಇಬ್ಬರು ಸಾವು, ಐವರಿಗೆ ಗಂಭೀರ ಗಾಯ