Free bus travel for women: ಬಾಗಲಕೋಟೆಯಲ್ಲಿ ಕರ್ನಾಟಕ ಚಾಲಕರ ಸಂಘದಿಂದ ಪ್ರತಿಭಟನೆ - ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
🎬 Watch Now: Feature Video
ಬಾಗಲಕೋಟೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ 'ಶಕ್ತಿ ಯೋಜನೆ' ಸ್ಥಗಿತಗೊಳಿಸುವಂತೆ ಆಗ್ರಹಿಸಿ ನಿನ್ನೆ(ಸೋಮವಾರ) ಕರ್ನಾಟಕ ಚಾಲಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಚಾಲಕ ಸಂಘದ ಸದಸ್ಯರು "ಉಚಿತ ಬಸ್ ಪ್ರಯಾಣದಿಂದಾಗಿ ಸಾಕಷ್ಟು ತೊಂದರೆ ಉಂಟಾಗಿದೆ. ಆಟೋ, ಟಂಟಂ ಹಾಗೂ ಬಾಡಿಗೆಗಾಗಿ ಕಾರು ಚಾಲನೆ ಮಾಡುತ್ತಿರುವ ಚಾಲಕರಿಗೆ ಸಂಕಷ್ಟ ಎದುರಾಗಿದೆ" ಎಂದು ತಮ್ಮ ಅಳಲು ತೋಡಿಕೊಂಡರು.
ಬ್ಯಾಂಕಿನಲ್ಲಿ ಸಾಲ ಮಾಡಿ ಕಾರು ಖರೀದಿಸಲಾಗಿದೆ. ಕಂತು ಕಟ್ಟಲು ಸಾಧ್ಯವಾಗದೇ ಪರದಾಡುವಂತಾಗಿದೆ. ಮಹಿಳೆಯರು ಉಚಿತ ಬಸ್ ಪ್ರಯಾಣ ಹಿನ್ನೆಲೆ, ದೇವಸ್ಥಾನ ಹಾಗೂ ಇತರ ಪ್ರದೇಶಗಳಿಗೆ ಸಂಚಾರ ಮಾಡಬೇಕಾದರೆ ಬಸ್ ಮೂಲಕ ಪ್ರಯಾಣ ಮಾಡುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ಕೂಡಲೇ ಗಮನ ಹರಿಸಿ ಶಕ್ತಿ ಯೊಜನೆ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ನೂರಾರು ಸಂಖ್ಯೆಯಲ್ಲಿ ಜಾಮಾಯಿಸಿದ ಚಾಲಕರು ಸರ್ಕಾರದ ಯೋಜನೆ ವಿರುದ್ಧ ಘೋಷಣೆ ಕೂಗುತ್ತಾ ನವ ನಗರದ ಬಸ್ ನಿಲ್ದಾಣದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಾಲಕರ ಒಕ್ಕೂಟ ಸಂಘದ ರಾಜ್ಯಾಧ್ಯಕ್ಷರಾದ ಬಂದಗಿಸಾಬ ಕೊಳ್ಳಿ ಮಾತನಾಡಿ "ಶಕ್ತಿ ಯೋಜನೆ ಸ್ಥಗಿತ ಮಾಡಿ, ಇಲ್ಲವೇ ಖಾಸಗಿ ವಾಹನ ಚಾಲಕರಿಗೆ ಪಯಾರ್ಯ ಉದ್ಯೋಗ ನೀಡಿ" ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಇದನ್ನೂ ಓದಿ: ಹುಬ್ಬಳ್ಳಿ: ಮಹಿಳೆಯರಿಗೆ ಉಚಿತ ಬಸ್ ಪಾಸ್ ಖಂಡಿಸಿ ಆಟೋ ಚಾಲಕರಿಂದ ಪ್ರತಿಭಟನೆ