ಜನತಾದರ್ಶನ ಕಾರ್ಯಕ್ರಮಕ್ಕೆ ಫ್ರೀ ಬಸ್ ಮೂಲಕ ಪ್ರಯಾಣಿಸಿದ ಬಾಗಲಕೋಟೆ ಡಿಸಿ- ವಿಡಿಯೋ - ​ ETV Bharat Karnataka

🎬 Watch Now: Feature Video

thumbnail

By ETV Bharat Karnataka Team

Published : Oct 10, 2023, 4:29 PM IST

ಬಾಗಲಕೋಟೆ : ಶಕ್ತಿ ಯೋಜನೆಯ ಉಚಿತ ಬಸ್‌ನಲ್ಲಿ ಪ್ರಯಾಣ ಮಾಡುವ ಮೂಲಕ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಗಮನ ಸೆಳೆದರು. ಅನಾವಶ್ಯಕ ಖರ್ಚು ಕಡಿಮೆ ಮಾಡುವ ಉದ್ದೇಶ ಹಾಗೂ ಪರಿಸರ ಮಾಲಿನ್ಯ ತಗ್ಗಿಸುವ ಸಲುವಾಗಿ ತೇರದಾಳದಲ್ಲಿ ನಡೆದ ಜಿಲ್ಲಾಧಿಕಾರಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳೂ ತಮ್ಮ ಸರಕಾರಿ ವಾಹನಗಳನ್ನು ಉಪಯೋಗಿಸದೇ, ಕಡ್ಡಾಯವಾಗಿ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರಿ ಬಸ್ ಮೂಲಕವೇ ಪ್ರಯಾಣಿಸಿದರು. 

ನಂತರ ತೇರದಾಳ ಪಟ್ಟಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸಿ, ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಶಾಸಕ ಸಿದ್ದು ಸವದಿ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿ, ಜನರ ಕುಂದು ಕೊರತೆಗಳನ್ನು ಬಗೆಹರಿಸುವ ಕುರಿತು ಭರವಸೆ ನಡೆಸಿದರು. ಶಕ್ತಿ ಯೋಜನೆಯ ಉಚಿತ ಬಸ್‌ನಲ್ಲಿ ಪ್ರಯಾಣಿಸಿದ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.     

ಇದನ್ನೂ ಓದಿ : 'ಶಾಶ್ವತವಾಗಿ ಜೈಲಿಗೆ ಹೋದ್ರೂ ಅಚ್ಚರಿಯಿಲ್ಲ' ಎಂಬ ಹೆಚ್‌ಡಿಕೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ ಇದು: ವಿಡಿಯೋ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.