ಬಳ್ಳಾರಿ ನಗರ ಕ್ಷೇತ್ರದಿಂದ ಜಿ. ಸೋಮಶೇಖರ್ ರೆಡ್ಡಿ ಉಮೇದುವಾರಿಕೆ ಸಲ್ಲಿಕೆ.. - ಚುನಾವಣಾಧಿಕಾರಿಯಾಗಿರುವ ಪಾಲಿಕೆಯ ಆಯುಕ್ತರಿಗೆ
🎬 Watch Now: Feature Video
ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಶನಿವಾರ ಬಿಜೆಪಿ ಅಭ್ಯರ್ಥಿ ಜಿ. ಸೋಮಶೇಖರ್ ರೆಡ್ಡಿ ಉಮೇದುವಾರಿಕೆ ಸಲ್ಲಿಸಿದರು. ಶಾಸಕ ಜಿ ಸೋಮಶೇಖರ್ ರೆಡ್ಡಿ ಶನಿವಾರ ಬೆಳಗ್ಗೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕಾಸಪುರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಬಿ ಫಾರಂ ಇರಿಸಿ ಪೂಜೆ ಸಲ್ಲಿಸಿದರು.
ನಂತರ ಮಧ್ಯಾಹ್ನ ಕನಕದರ್ಗಮ್ಮ ದೇವಿಯ ದೇವಸ್ಥಾನದಲ್ಲೂ ಪಕ್ಷದ ಬಿ ಫಾರಂ ಇರಿಸಿ ಪೂಜೆ ಸಲ್ಲಿಸಿ. ಬಳಿಕ ಸಾವಿರಾರು ಕಾರ್ಯಕರ್ತರೊಂದಿಗೆ ನಗರದ ರಾಜ ಬೀದಿಗಳಲ್ಲಿ ಮೆರವಣಿಗೆ ಸಾಗಿ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಯಾಗಿರುವ ಪಾಲಿಕೆಯ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಸೋಮಶೇಖರ್ ರೆಡ್ಡಿ , ಮೂರನೇ ಬಾರಿಗೆ ವಿಧಾನಸೌಧ ಪ್ರವೇಶಿಸಲು ನಾಮಪತ್ರ ಸಲ್ಲಿಸುತ್ತಿದ್ದು, ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಿರುವ ಕಾರಣ ಮತ್ತೊಮ್ಮೆ ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಸೋಮಶೇಖರ್ ರೆಡ್ಡಿ ಅವರೊಂದಿಗೆ ಸಚಿವ ಬಿ ಶ್ರೀರಾಮುಲು, ಜಿಲ್ಲಾಧ್ಯಕ್ಷ ಮುರಹರಗೌಡ ಸೇರಿ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ:ವಿಧಾನಸಭೆ ಚುನಾವಣೆ : ಸಾಗರ ಬಿಜೆಪಿ ಅಭ್ಯರ್ಥಿ ಹಾಲಪ್ಪಗಿಂತ ಪತ್ನಿ ಯಶೋಧ ಶ್ರೀಮಂತೆ