ಶ್ರೀನಗರದಲ್ಲಿ ಜಿ 20 ಶೃಂಗಸಭೆ: ಪ್ರತಿನಿಧಿಗಳಿಗೆ ಆತ್ಮೀಯ ಸ್ವಾಗತ - ಜಿ 20 ಶೃಂಗಸಭೆ
🎬 Watch Now: Feature Video
ಶ್ರೀನಗರ: 3ನೇ ಜಿ 20 ಪ್ರವಾಸೋದ್ಯಮ ಕಾರ್ಯಕಾರಿ ಗುಂಪು ಸಭೆಗೆ ಆಗಮಿಸಿದ ಅಂತಾರಾಷ್ಟ್ರೀಯ ನಿಯೋಗಗಳನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಆತ್ಮೀಯವಾಗಿ ಸ್ವಾಗತಿಸಲಾಯಿತು. ಮೇ 22-24 ರವರೆಗೆ ಶ್ರೀನಗರದಲ್ಲಿ ಮಹತ್ವದ ಸಭೆ ನಡೆಯಲಿದೆ. ವಿಮಾನ ನಿಲ್ದಾಣದಲ್ಲಿ ಜಿ20 ಶೆರ್ಪಾ ಅಮಿತಾಬ್ ಕಾಂತ್ ಅವರೊಂದಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಅತಿಥಿಗಳನ್ನು ಸ್ವಾಗತಿಸಿದರು. ಜಮ್ಮು ಮತ್ತು ಕಾಶ್ಮೀರದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಸ್ಥಳೀಯ ಕಲಾವಿದರಿಂದ ನೃತ್ಯ ಪ್ರದರ್ಶನ ನಡೆಯಿತು.
ಶ್ರೀನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಡ್ರೋನ್ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಭದ್ರತಾ ಗಾರ್ಡ್ (NSG) ಮತ್ತು ಮಾರ್ಕೋಸ್ (MARCOS) ಕಮಾಂಡೋಗಳನ್ನು ಸ್ಥಳದ ಸುತ್ತಲೂ ನಿಯೋಜಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (SOG) ಯಾವುದೇ ಭಯೋತ್ಪಾದಕ ಘಟನೆಗಳನ್ನು ತಡೆಯಲು ಭದ್ರತೆ ನೀಡಲು ಹಲವು ಸ್ಥಳಗಳಲ್ಲಿ ನಿಯೋಜಿಸಲಾಗಿದೆ.
ಜಿ 20 ವರ್ಕಿಂಗ್ ಗ್ರೂಪ್ ಸಭೆಯು ಐದು ಪ್ರಮುಖ ಆದ್ಯತೆಯ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ. ಮುಖ್ಯವಾಗಿ ಹಸಿರು ಪ್ರವಾಸೋದ್ಯಮ, ಡಿಜಿಟಲೀಕರಣ, ಕೌಶಲ್ಯಗಳು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ನಿರ್ವಹಣೆ ಸೇರಿವೆ. ಸಭೆಯು ಆರ್ಥಿಕ ಬೆಳವಣಿಗೆ ಬಲಪಡಿಸಲು, ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಪ್ರದೇಶದ ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸಭೆಯು ಜಿ 20 ಸದಸ್ಯ ರಾಷ್ಟ್ರಗಳು, ಆಹ್ವಾನಿತ ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಉದ್ಯಮದ ಮಧ್ಯಸ್ಥಗಾರರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ.
ಇದನ್ನೂ ಓದಿ: 'ಕಾಶ್ಮೀರ ಭೂಲೋಕದ ಸ್ವರ್ಗ'! ಜಿ20 ಸಭೆಗೂ ಮುನ್ನ ಅರಬ್ ಇನ್‌ಫ್ಲುಯೆನ್ಸರ್ ಬಣ್ಣನೆ