ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ 10 ಮಂದಿಗೆ ಗಾಯ
🎬 Watch Now: Feature Video
ಬೆಂಗಳೂರು : ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟದಿಂದ ಒಂದೇ ಕುಟುಂಬದ ಹತ್ತು ಜನರು ಗಾಯಗೊಂಡಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದ ಮನೆಯೊಂದರಲ್ಲಿ ಇಂದು ಬೆಳಗ್ಗೆ ನಡೆದಿದೆ. ಮನೆಯಲ್ಲಿದ್ದ ಎಲ್ಲರೂ ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ: ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
ಘಟನೆಯಲ್ಲಿ ಅಜ್ಮಲ್ (46), ನಜೀಮ್ (42), ರಿಯಾನ್ (14), ಅದ್ನಾನ್ (12), ಫಯಾಜ್ (10), ಮೆಹರುನ್ನಿಸಾ (11), ಅಜಾನ್ (5) , ಜೈನಬ್ (8) ಅಮೀರ್ ಜಾನ್ (52), ಶಬನಾಜ್ (18), ನಸೀಮಾ, (40), ಸಲ್ಮಾ (33) ಹಾಗೂ ರೇಷ್ಮಾ ಬಾನು (48) ಎಂಬುವರು ಗಾಯಗೊಂಡಿದ್ದಾರೆ. ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ರಾತ್ರಿ ತಿಂಡಿ, ತಿನಿಸುಗಳನ್ನು ಮಾಡಿಡಲಾಗಿತ್ತು. ಈ ವೇಳೆ ಸಿಲಿಂಡರ್ ಆಫ್ ಮಾಡುವುದನ್ನು ಮರೆತಿದ್ದು, ಗ್ಯಾಸ್ ಸೋರಿಕೆಯಾಗಿದೆ. ಬೆಳಗ್ಗೆ 6:45ರ ಸುಮಾರಿಗೆ ಅಡುಗೆ ಮಾಡಲು ಹೋದಾಗ ದಿಢೀರ್ ಸ್ಫೋಟ ಉಂಟಾಗಿದೆ.
ಕಟ್ಟಡದ ಗೋಡೆ, ಮೆಟ್ಟಿಲುಗಳು ಬಿರುಕು ಬಿಟ್ಟಿವೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ರಾಜಾಜಿನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮನೆಯೊಳಗೆ ನಿಗೂಢ ಸ್ಫೋಟ, ಮೂವರಿಗೆ ಗಂಭೀರ ಗಾಯ
ಕಳೆದ ವರ್ಷದ ಮೇ 24 ರಂದು ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆಯ ಅಡುಗೆ ಕೋಣೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಶಾಂತಿಪುರದಲ್ಲಿ ನಡೆದಿತ್ತು. ಶಾಂತಿಪುರದ ನಿವಾಸಿ ಶ್ರೀಧರ್ ಎಂಬುವರ ಮನೆಯಲ್ಲಿ ಬೆಳಗ್ಗೆ ತಿಂಡಿ ಮಾಡುವಾಗ ಗ್ಯಾಸ್ ಸೋರಿಕೆಯಾಗಿತ್ತು.
ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸೋರಿಕೆ ಹೊತ್ತಿ ಉರಿದ ಅಡುಗೆ ಮನೆ: ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ