ಘಾಟಿ ಸುಬ್ರಹ್ಮಣ್ಯಸ್ವಾಮಿ ಪಲ್ಲಕ್ಕಿ ಹೊತ್ತು ಪ್ರದಕ್ಷಿಣೆ ಹಾಕಿದ ಪೊಲೀಸರು - ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್
🎬 Watch Now: Feature Video
ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತು ಬೆಂಗಳೂರು ಪೊಲೀಸರು ದೇವಸ್ಥಾನದಲ್ಲಿ ಮಂಗಳವಾರ ಪ್ರದಕ್ಷಿಣೆ ಹಾಕಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಕೊನೆ ಕ್ಷಣದಲ್ಲಿ ರದ್ದಾಗಿದ್ದು, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ದಂಪತಿ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಪಲ್ಲಕ್ಕಿ ಹೊತ್ತು ಮೆರವಣಿಗೆಯಲ್ಲಿ ಪ್ರದಕ್ಷಿಣೆ ಹಾಕಿದರು. ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ವೃತ್ತ ನಿರೀಕ್ಷಕ ಹರೀಶ್, ಮುನಿಕೃಷ್ಣ ಮತ್ತು ಪೊಲೀಸ್ ಸಿಬ್ಬಂದಿ ಪಲ್ಲಕ್ಕಿ ಹೊತ್ತು ಸಾಗಿದರು.
Last Updated : Feb 3, 2023, 8:38 PM IST