ಧಗಧಗನೆ ಹೊತ್ತಿ ಉರಿದು ಸುಟ್ಟು ಕರಕಲಾದ ಗೂಡ್ಸ್ ವಾಹನ - ಸುಟ್ಟು ಕರಕಲಾದ ಗೂಡ್ಸ್ ವಾಹನ
🎬 Watch Now: Feature Video
ಬೆಳಗಾವಿ: ಗೂಡ್ಸ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ವಾಹನ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಳಗಾವಿ ಮತ್ತು ಗೋಕಾಕ್ ರಸ್ತೆ ಸಂಪರ್ಕಿಸುವ ಅಂಕಲಗಿ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆಯಿತು. ವಿವಿಧ ವಸ್ತುಗಳನ್ನ ತುಂಬಿಕೊಂಡು ಹೋಗುತ್ತಿರುವಾಗ ಮಾರ್ಗಮಧ್ಯೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Last Updated : Feb 3, 2023, 8:39 PM IST