ಚಿಕ್ಕಮಗಳೂರು : ಎರಡು ಸರ್ಕಾರಿ ಬಸ್ಗಳ ಮುಖಾಮುಖಿ ಡಿಕ್ಕಿ, 20 ಜನರಿಗೆ ಗಾಯ - ಸರ್ಕಾರಿ ಬಸ್ನ ಚಾಲಕರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/10-12-2023/640-480-20233805-thumbnail-16x9-sanjuuu.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Dec 10, 2023, 8:25 PM IST
ಚಿಕ್ಕಮಗಳೂರು : ಎರಡು ಸರ್ಕಾರಿ ಬಸ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಗಳ ಅಪಘಾತಕ್ಕೆ ಎರಡೂ ಬಸ್ನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ ಅನ್ನು ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಬಸ್ಗಳು ಮುಖಾಮುಖಿ ಡಿಕ್ಕಿ ಆದ ಸಂದರ್ಭದಲ್ಲಿ ಎರಡು ಬಸ್ನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ಗಾಯವಾಗಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 5 ಆಂಬ್ಯುಲೆನ್ಸ್ಗಳಲ್ಲಿ ಅವರನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ತಾಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ರಸ್ತೆಗಳಲ್ಲಿ ತಿರುವು ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಹೀಗಾಗಿ ಮೂಡಿಗೆರೆ ತಾಲೂಕಿನ ಅಲ್ಲಲ್ಲೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದರೆ, ತರಬೇತಿ ಪಡೆದ ಸರ್ಕಾರಿ ಬಸ್ನ ಚಾಲಕರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದಕ್ಕೆ ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಹಿರಿಯೂರು ಬಳಿ ಲಾರಿ-ಬಸ್ ಭೀಕರ ಅಪಘಾತ: ಐವರು ದುರ್ಮರಣ