ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು: ವಿಡಿಯೋ - Governor Thawar Chand Gehlot

🎬 Watch Now: Feature Video

thumbnail

By ETV Bharat Karnataka Team

Published : Oct 18, 2023, 1:25 PM IST

ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನವರಾತ್ರಿಯ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ರಾಜ್ಯಪಾಲರ ಜೊತೆಗೆ ಆಗಮಿಸಿದ್ದರು.

ಮೈಸೂರು ವಿವಿ ಘಟಿಕೋತ್ಸವದಲ್ಲಿ ಭಾಗಿ: ಮೈಸೂರು ವಿಶ್ವವಿದ್ಯಾಲಯದ 103 ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಲಿದ್ದು, ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ‌. ಮೈಸೂರು ವಿವಿ ಘಟಿಕೋತ್ಸವದಲ್ಲಿ ನಿವೃತ್ತ ಕ್ರಿಕೆಟಿಗ ಜಾವಗಲ್​ ಶ್ರೀನಾಥ್​, ನಾಡೋಜ ವಿಶ್ರಾಂತ ವೈದ್ಯಕೀಯ ಪ್ರಾಧ್ಯಾಪಕ ಡಾ. ಪಿ ಎಸ್​ ಶಂಕರ್​ ಹಾಗೂ ಮೈಸೂರು ಸ್ಥಳೀಯ ಪತ್ರಿಕೆಯ ಪ್ರಧಾನ ಸಂಪಾದಕ ಕೆ ಬಿ ಗಣಪತಿ ಅವರಿಗೆ ಗೌರವ ಡಾಕ್ಟರೇಟ್​ ನೀಡಿ ಗೌರವಿಸಲಾಗುವುದು. ಸಂಜೆ ಮೈಸೂರಿನಲ್ಲೇ ಇರುವ ಮತ್ತೊಂದು ಸಂಗೀತ ವಿಶ್ವವಿದ್ಯಾಲಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ 5 ಮತ್ತು 6 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದು, ರಾಜ್ಯಪಾಲರು ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ನೋಡಿ : ನಾಡದೇವತೆ ಚಾಮುಂಡೇಶ್ವರಿಗೆ ನವರಾತ್ರಿಯ 9 ದಿನವೂ 9 ರೀತಿಯ ವಿಶೇಷ ಅಲಂಕಾರ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.