ಮೈಸೂರು ದಸರಾ 2022: ಗ್ರಾಮೀಣ ದಸರಾಗೆ ಚಾಲನೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಮೈಸೂರು : ಜಿಲ್ಲೆಯ ಜಯಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ದಸರಾವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಜಿ.ಟಿ.ದೇವೇಗೌಡ ಉದ್ಘಾಟನೆ ಮಾಡಿದರು. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು. ನಾಡಹಬ್ಬ ದಸರಾ ನಗರಕ್ಕಷ್ಟೇ ಸೀಮಿತವಾಗಬಾರದು. ಗ್ರಾಮಗಳಲ್ಲೂ ನಡೆಸಲು ಉದ್ದೇಶಿಸಿರುವುದರಿಂದ ಜಯಪುರದಲ್ಲಿ ಗ್ರಾಮೀಣ ದಸರಾ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Last Updated : Feb 3, 2023, 8:28 PM IST