ಬಿಳಿಗಿರಿ ರಂಗನಾಥ ಸ್ವಾಮಿಯ ರಥೋತ್ಸವ ವೈಭವ: ವಿಡಿಯೋ - ಬಿಳಿಗಿರಿರಂಗನಾಥ ಬೆಟ್ಟ
🎬 Watch Now: Feature Video
Published : Jan 17, 2024, 11:31 AM IST
ಚಾಮರಾಜನಗರ: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣ ಹಾಗು ಯಾತ್ರಾಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಂಗನಾಥ ಸ್ವಾಮಿಯ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಪೌರಾಣಿಕ ಹಾಗೂ ಐತಿಹಾಸಿಕ ಪ್ರಸಿದ್ಧಿಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದ ಚಿಕ್ಕಜಾತ್ರೆಗೆ ಅಪಾರ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ಜಿಲ್ಲೆಯಿಂದಷ್ಟೇ ಅಲ್ಲದೇ, ವಿವಿಧ ರಾಜ್ಯಗಳಿಂದ ಬಂದಿದ್ದ ಭಕ್ತರು ರಥ ಎಳೆದು ಪುನೀತರಾದರು. ಗರುಡ ಪಕ್ಷಿ ರಥದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ಚಾಲನೆ ದೊರೆಯಿತು.
ದೇಗುಲದಲ್ಲಿ ಪ್ರತಿ ವರ್ಷ ಎರಡು ಬಾರಿ ರಥೋತ್ಸವ ನಡೆಯುತ್ತದೆ. ಸಂಕ್ರಾಂತಿಯ ಮಾರನೇ ದಿನ ಚಿಕ್ಕಜಾತ್ರೆ ನಡೆದರೆ, ಏಪ್ರಿಲ್/ಮೇ ತಿಂಗಳಲ್ಲಿ ದೊಡ್ಡಜಾತ್ರೆ ನಡೆಯುತ್ತದೆ. ಈ ವೇಳೆ ಇಲ್ಲಿ ದಾಸಂದಿರು ಅಕ್ಕಿ, ಕಜ್ಜಾಯ, ಬೆಲ್ಲ, ತೆಂಗಿನಕಾಯಿ, ಕಡ್ಲೆ ಹಾಕಿ ಬ್ಯಾಟೆಮನೆ ಸೇವೆ ಮಾಡುವ ಸಂಪ್ರದಾಯವಿದೆ. ದೇಗುಲದ ಸುತ್ತ ಜಾಗಟೆ, ಶಂಖನಾದ ಹೊಮ್ಮಿಸಿ ಬಹುಪರಾಕ್, ಬಹುಪರಾಕ್ ಎಂಬ ಜಯಘೋಷದೊಂದಿಗೆ ಚಿಕ್ಕಜಾತ್ರೆ ನಡೆಯುತ್ತದೆ. ರಂಗನಾಥ ಸ್ವಾಮಿಗೆ ಮೈಸೂರಿನ ಮಹಾರಾಜರು ನೀಡಿರುವ ಕಿರೀಟ ಸೇರಿದಂತೆ ವಿವಿಧ ಚಿನ್ನಾಭರಣಗಳಿಂದ ಅಲಂಕರಿಸಲಾಗಿತ್ತು.
ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ದ್ವಿಚಕ್ರ ವಾಹನಗಳನ್ನು ಬೆಟ್ಟದ ತಪ್ಪಲಿನಲ್ಲೇ ನಿರ್ಬಂಧಿಸಲಾಗಿತ್ತು.
ಇದನ್ನೂ ಓದಿ: ರಾಜ್ಯದ ಗಡಿ ಭಾಗದಿಂದ ಅಯೋಧ್ಯೆಗೆ ಹೊರಟ ಕಂಬಳಿ