ಕಲಬುರಗಿಯಲ್ಲಿ 'ಗೃಹಜ್ಯೋತಿ'ಗೆ ಚಾಲನೆ: ಫಲಾನುಭವಿಗಳಿಗೆ ಭರ್ಜರಿ ಭೋಜನದ ವ್ಯವಸ್ಥೆ, ಶುಚಿತ್ವಕ್ಕೆ ಮೊದಲ ಆದ್ಯತೆ
🎬 Watch Now: Feature Video
ಕಲಬುರಗಿ: 2023ರ ರಾಜ್ಯ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ 'ಗೃಹಜ್ಯೋತಿ' ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸಪ್ತ ಸಚಿವರು ಉಪಸ್ಥಿತರಿದ್ದರು.
ಕಲಬುರಗಿಯ ಎನ್.ವಿ ಮೈದಾನದಲ್ಲಿ 'ಗೃಹಜ್ಯೋತಿ' ಚಾಲನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಊಟವನ್ನು ಸವಿದರು. ಊಟಕ್ಕೆ ಲಡ್ಡು, ಪಲಾವ್, ಸಾಂಬಾರ್ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು.
ನೂಕುನುಗ್ಗಲು ಉಂಟಾಗುವುದನ್ನು ತಡೆಯಲು ಹತ್ತಾರು ಊಟದ ಕೌಂಟರ್ಗಳನ್ನು ಮಾಡಲಾಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗಳು ಇದ್ದರು. ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಪೌರ ಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಒಟ್ಟಾರೆಯಾಗಿ ಊಟದ ಸ್ಥಳದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿರುವುದು ಕಂಡುಬಂತು.
ಇದನ್ನೂ ಓದಿ: Gruha Jyothi Scheme: ನಾಳೆ ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ; ಸಕಲ ಸಿದ್ಧತೆ