ಗುಜರಾತ್ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಐಷಾರಾಮಿ ಲಂಬೋರ್ಗಿನಿ ಕಾರಲ್ಲಿ ಬಂದ ಕಾಂಗ್ರೆಸ್ ಅಭ್ಯರ್ಥಿ - ಕಾಂಗ್ರೆಸ್ ಅಭ್ಯರ್ಥಿ ಧರ್ಮೇಂದ್ರ ಪಟೇಲ್
🎬 Watch Now: Feature Video
ಅಹಮದಾಬಾದ್ (ಗುಜರಾತ್): ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ಬೃಹತ್ ರ‍್ಯಾಲಿಗಳ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಇದರ ನಡುವೆ ಅಹಮದಾಬಾದ್ನ ಅಮರೈವಾಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧರ್ಮೇಂದ್ರ ಪಟೇಲ್ ತಮ್ಮ ನಾಮಪತ್ರ ಸಲ್ಲಿಕೆಗೆ ಐಷಾರಾಮಿ ಲಂಬೋರ್ಗಿನಿ ಕಾರಿನಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. ಕಚೇರಿ ಹೊರಗಡೆ ನಿಲ್ಲಿಸಿದ್ದ ಲಂಬೋರ್ಗಿನಿ ಕಾರನ್ನು ನೋಡಲು ಜನರು ಗುಂಪು ಸೇರಿದ್ದರು.
Last Updated : Feb 3, 2023, 8:32 PM IST