ಗುಜರಾತ್ನಲ್ಲಿ ಭಾರಿ ಮಳೆ.. 12,644 ಜನ ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರ - NDRF team
🎬 Watch Now: Feature Video
Published : Sep 18, 2023, 10:49 PM IST
ಸೂರತ್ (ಗುಜರಾತ್) : ಗುಜರಾತ್ನಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದಲ್ಲದೇ ಮಧ್ಯಪ್ರದೇಶದಲ್ಲೂ ವರುಣನ ಆರ್ಭಟದಿಂದಾಗಿ ನರ್ಮದಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಸರ್ದಾರ್ ಸರೋವರ ಅಣೆಕಟ್ಟೆಯಿಂದ 19 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇದರಿಂದ ನರ್ಮದಾ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳು ಜಲಾವೃತಗೊಂಡಿವೆ.
ಅಲರ್ಟ್ ಮೋಡ್ನಲ್ಲಿ ಸರ್ಕಾರ : ಈ ಬಗ್ಗೆ ಮಾಧ್ಯಮದೊಂದಿಗೆ ರಾಜ್ಯ ಸರ್ಕಾರದ ವಕ್ತಾರ ರಿಷಿಕೇಶ್ ಪಟೇಲ್ ಮಾತನಾಡಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಗಮನ ಗುಜರಾತ್ ಮೇಲಿದ್ದು, ಇಡೀ ವ್ಯವಸ್ಥೆ ಅಲರ್ಟ್ ಮೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿದೆ. ರಿಷಿಕೇಶ್ ಪಟೇಲ್ ಅವರು ತಮ್ಮ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳ ವಿವರಗಳನ್ನು ಪಡೆಯಲು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಇದುವರೆಗೆ ರಾಜ್ಯದ 8 ಜಿಲ್ಲೆಗಳಿಂದ 12,644 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, 7 ಜಿಲ್ಲೆಗಳಿಂದ 822 ಜನರನ್ನು ರಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಿಷಿಕೇಶ್ ಪಟೇಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಪ್ರಧಾನ ಕಾರ್ಯದರ್ಶಿ ಕೈಲಾಸನಾಥನ್ ಮತ್ತು ಹಿರಿಯ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡ ನಿಯೋಜನೆ : ಸಂತ್ರಸ್ತ ಜಿಲ್ಲೆಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿರುವುದು, ನೀರಿನಲ್ಲಿ ಸಿಲುಕಿರುವ ಜನರನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳ ಸಹಾಯದಿಂದ ಸ್ಥಳಾಂತರಿಸಿರುವುದು ಸೇರಿದಂತೆ ಇನ್ನಿತರ ಮಾಹಿತಿಯನ್ನು ಅವರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ತಿಳಿದುಕೊಂಡಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಎನ್‌ಡಿಆರ್‌ಎಫ್‌ನ 10 ತಂಡಗಳು ಮತ್ತು ಎಸ್‌ಡಿಆರ್‌ಎಫ್‌ನ 10 ತಂಡಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಇದನ್ನೂ ಓದಿ: ಜಲಪಾತದ ನೀರಿನ ರಭಸಕ್ಕೆ ಕೊಚ್ಚಿ ಹೋದ ಯುವಕ ಸಾವು