ದೇವನಹಳ್ಳಿಯಲ್ಲಿ ಪಟಾಕಿ ಕಿಡಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ - ಅಗ್ನಿಶಾಮಕ ದಳ

🎬 Watch Now: Feature Video

thumbnail

By ETV Bharat Karnataka Team

Published : Nov 14, 2023, 2:26 PM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಪಟಾಕಿ ಸಿಡಿಸುವ ವೇಳೆ ಬೆಂಕಿ ಕಿಡಿ ತಗುಲಿದ ಪರಿಣಾಮ ಗುಜರಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡದಲ್ಲಿ ಹಾನಿಯಾದ ಗುಜರಿ ಅಂಗಡಿಯು ಮುಬಾರಕ್ ಎಂಬುವರಿಗೆ ಸೇರಿದೆ.

ಪಟಾಕಿಯ ಕಿಡಿ ಗುಜರಿ ಅಂಗಡಿ ಮೇಲೆ ಬಿದ್ದು ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಪ್ರಕರಣ- ಫರ್ನಿಚರ್ ಶೋರೂಂ ಅಗ್ನಿಗಾಹುತಿ:  ಫರ್ನಿಚರ್ ಶೋ ರೂಂ ಬೆಂಕಿಗೆ ಆಹುತಿಯಾಗಿದ್ದ ಘಟನೆ ಭಾನುವಾರ ಹೊರಮಾವು ಬಳಿಯ ಔಟರ್​ ರಿಂಗ್ ರೋಡ್​ನಲ್ಲಿ ನಡೆದಿತ್ತು. ಐದು ಅಂತಸ್ತಿನ‌ ಕಟ್ಟಡದ ನೆಲಮಹಡಿ, ಮೊದಲನೇ ಮಹಡಿಯಲ್ಲಿದ್ದ ಫರ್ನಿಚರ್ ಶೋ ರೂಂಗೆ ಬೆಂಕಿ ತಗುಲಿತ್ತು. ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್, ಖಾಸಗಿ ಕಂಪನಿಯೊಂದು ಇದೆ. ಫರ್ನಿಚರ್ ಶೋರೂಂಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಯು ಕಟ್ಟಡದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಿದ್ದರು. ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ನಡೆದಿರುವ ಶಂಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಲಂಗರು ಹಾಕಿದ್ದ ಬೋಟ್​ಗಳಿಗೆ ಆಕಸ್ಮಿಕ ಬೆಂಕಿ: ಕೋಟ್ಯಂತರ ರೂಪಾಯಿ ನಷ್ಟ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.