ರಾಯಚೂರಲ್ಲಿ ಸಂಭ್ರಮದಿಂದ ಗುರುಪೂರ್ಣಿಮೆ ಆಚರಣೆ - Guruvandana program on the occasion of Gurupurnima in Raichur
🎬 Watch Now: Feature Video
ರಾಯಚೂರು : ಬಿಸಿಲೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಮಳೆಯ ನಡುವೆಯೂ ಗುರುಪೂರ್ಣಿಮೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ದೇವಾಲಯಗಳಲ್ಲಿ, ಮಠಗಳಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಇತ್ತ ನಗರದ ಸೋಮವಾರ ಪೇಟೆ ಮಠದಲ್ಲಿ ಅಭಿನವ ಶ್ರೀರಾಚೋಟಿವೀರ ಶಿವಚಾರ್ಯರ ನೇತೃತ್ವದಲ್ಲಿ ಗುರುವಂದನಾ ಸಮಾರಂಭ ಹಾಗೂ ಇಷ್ಟಲಿಂಗ ಪೂಜೆ ಮೂಲಕ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಮಳೆಯನ್ನು ಲೆಕ್ಕಿಸದೆ ಭಕ್ತರು ಶ್ರೀಮಠಕ್ಕೆ ಆಗಮಿಸಿ ಇಷ್ಟಲಿಂಗ ಪೂಜೆಯಲ್ಲಿ ಭಾಗವಹಿಸಿದರು.
Last Updated : Feb 3, 2023, 8:24 PM IST