ಹಾವೇರಿ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ, ಅಂಗಡಿಗಳಿಗೆ ನುಗ್ಗಿದ ನೀರು - ಈಟಿವಿ ಭಾರತ ಕನ್ನಡ
🎬 Watch Now: Feature Video
ಹಾವೇರಿ: ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಇಂದು ಸಂಜೆ ಧಾರಾಕಾರ ಮಳೆಯಾಗಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ನಿಂತು ಜನರ ಓಡಾಟಕ್ಕೆ ತೊಂದರೆಯಾಯಿತು. ಕಲಬಾವಿ ಸಮೀಪದಲ್ಲಿ ರಸ್ತೆಗಳು ಕೆರೆಯಂತಾಗಿತ್ತು. ಮಳೆ ನೀರು ಗ್ಯಾರೇಜ್ ಮತ್ತು ಅಂಗಡಿಗಳಿಗೆ ನುಗ್ಗಿತು. ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ದ್ವಿಚಕ್ರವಾಹನ ಸವಾರರು ಪರದಾಡಿದರು.
Last Updated : Feb 3, 2023, 8:29 PM IST