ಶಿವಮೊಗ್ಗದಲ್ಲಿ ಭಾರಿ ಮಳೆ : ರೈಲು ನಿಲ್ದಾಣದಲ್ಲಿ ನೀರು ಸೋರಿಕೆ.. ರಸ್ತೆಗಳು ಜಲಾವೃತ
🎬 Watch Now: Feature Video
ಶಿವಮೊಗ್ಗ : ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಮಲೆನಾಡಿಗೆ ಇಂದು ಮಧ್ಯಾಹ್ನ ವರುಣ ತಂಪೆರೆದಿದ್ದಾನೆ. ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಜೂನ್ ಮೊದಲ ವಾರದಲ್ಲಿ ಆರಂಭವಾಗಬೇಕಿದ್ದ ಮುಂಗಾರು 10 ದಿನಗಳ ಬಳಿಕ ರಾಜ್ಯಕ್ಕೆ ಆಗಮಿಸಿತ್ತು. ಇದರಿಂದಾಗಿ ಮುಂಗಾರು ಬಿತ್ತನೆ ಕೂಡ ವಿಳಂಬ ಆಗಿದೆ. ಇದೀಗ ಮಳೆಯಾಗಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸೋರುತಿಹುದು ಶಿವಮೊಗ್ಗ ರೈಲ್ವೆ ನಿಲ್ದಾಣ : ಧಾರಾಕಾರ ಮಳೆಗೆ ಶಿವಮೊಗ್ಗ ನಗರದ ಸಿಟಿ ರೈಲ್ವೇ ನಿಲ್ದಾಣ ಸೋರುತ್ತಿದೆ. ಇದರಿಂದಾಗಿ ರೈಲ್ವೇ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಯಿತು. ಭಾರೀ ಮಳೆಯಿಂದಾಗಿ ನಗರದ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದೆ. ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿಯಿಂದ ನಗರದ ಕೆ.ಆರ್ ಪುರಂನಲ್ಲಿ ಅಂಗಡಿಗಳಿಗೆ ನೀರು ನುಗ್ಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಧಾರಾಕಾರ ಮಳೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆ ಸಂಪೂರ್ಣ ಜಲಾವೃತವಾಗಿತ್ತು. ಈ ವೇಳೆ ಜಲಾವೃತವಾದ ರಸ್ತೆಯಲ್ಲಿ ಚಾಲಕನೋರ್ವ ಕಾರು ಚಲಾಯಿಸಿದ್ದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹತ್ತಾರು ಬೈಕ್ಗಳು ಉರುಳಿಬಿದ್ದಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : 110 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ರೈಲಿಂದ ಕೆಳಗೆ ಬಿದ್ದ ಯುವಕ : ಮುಂದೇನಾಯ್ತು ನೋಡಿ