ಭಾನುವಾರದ ಹುಣ್ಣಿಮೆ: ನಂಜನಗೂಡು ದೇವಸ್ಥಾನದಲ್ಲಿ ನೂಕುನುಗ್ಗಲು - ಮೈಸೂರು
🎬 Watch Now: Feature Video
ಮೈಸೂರು: ಭಾನುವಾರದ ಹುಣ್ಣಿಮೆ ಹಿನ್ನೆಲೆಯಲ್ಲಿ ಇಂದು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಭಾರಿ ನೂಕುನುಗ್ಗಲು ಕಂಡುಬಂತು. ದೇವರ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜನಸಂದಣಿ ಹಿನ್ನೆಲೆಯಲ್ಲಿ ದರ್ಶನ ಪಡೆಯಲು ಭಕ್ತರು ಹರಸಾಹಸ ಪಟ್ಟರು. ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದ ಭಕ್ತಾದಿಗಳನ್ನು ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲರಾದರು. ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹುಣ್ಣಿಮೆ ಎಫೆಕ್ಟ್: ಸಿಗದ ನಂಜುಂಡೇಶ್ವರನ ದರ್ಶನ, ಹೊರಗೇ ಪೂಜೆ ಸಲ್ಲಿಸಿದ ಭಕ್ತರು
2.53 ಕೋಟಿ ರೂ ಕಾಣಿಕೆ ಸಂಗ್ರಹ: ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಇತ್ತೀಚೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಕಳೆದ ಒಂದು ತಿಂಗಳಲ್ಲಿ 2.53 ಕೋಟಿ ರೂ ಕಾಣಿಕೆ ಸಂಗ್ರಹವಾಗಿದೆ. ಬೆಟ್ಟದ ಬಸ್ ನಿಲ್ದಾಣ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿತ್ತು.
ಇದನ್ನೂ ಓದಿ: ಭಾರತ ಹುಣ್ಣಿಮೆ ದಿನ, ನಂಜುಂಡೇಶ್ವರ ದೇವಸ್ಥಾನದಲ್ಲಿ ನೂಕುನುಗ್ಗಲು