ಹೊಸಕೋಟೆ: ಬೈಕ್​ಗಳಿಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದ ಕಾರು.. ಸಿಸಿಟಿವಿ ವಿಡಿಯೋ - Kammasandra Village of Hoskote Taluk

🎬 Watch Now: Feature Video

thumbnail

By

Published : Aug 6, 2023, 8:21 AM IST

Updated : Aug 6, 2023, 8:58 AM IST

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

ದೇವನಹಳ್ಳಿಯ ರಾಜೇಶ್ ಎಂಬುವರು ಹೊಸಕೋಟೆಯ ದೇವಸ್ಥಾನದಿಂದ ವಾಪಸ್​​ ಬರುತ್ತಿದ್ದಾಗ ಕಾರು ನೋಡ ನೋಡುತ್ತಿದ್ದಂತೆ ರಸ್ತೆ ಪಕ್ಕದಲ್ಲಿದ್ದ ಬೈಕ್​​ಗಳಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದವರು ಅದೃಷ್ಟವಶಾತ್​ ಪಾರಾಗಿದ್ದಾರೆ. ಕಾರು ಅಪಘಾತದ ದೃಶ್ಯವು ಪಕ್ಕದಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Raichur Accident Video: ಬೈಕ್​ಗೆ​ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು.. ಅಪಘಾತದ ದೃಶ್ಯ ವೈರಲ್

ಅತಿವೇಗದಿಂದ ಬಂದ ಕಾರು ರಸ್ತೆ ಪಕ್ಕದ ಬೈಕ್​ಗಳಿಗೆ ರಭಸವಾಗಿ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಏರ್ ಬ್ಯಾಗ್​ನಿಂದಾಗಿ ಅಪಾಯದಿಂದ ಬಚಾವ್​ ಆಗಿದ್ದಾರೆ. ಅಪಘಾತದಲ್ಲಿ ಕಾರು ಹಾಗೂ ಎರಡು ಬೈಕ್​ಗಳು ಜಖಂ ಆಗಿವೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಮಧುರೈನ ಮಸ್ತಾನಪಟ್ಟಿ ಟೋಲ್​ಗೆ ಟ್ರಕ್ ಡಿಕ್ಕಿ-ಸಿಬ್ಬಂದಿ ಸಾವು: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Last Updated : Aug 6, 2023, 8:58 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.