ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ: ತಪ್ಪಿದ ಭಾರೀ ಅನಾಹುತ - ಪೋಟೋ ಸ್ಟುಡಿಯೋಗಳಿಗೆ ಭಾರೀ ಪ್ರಮಾಣದ ನಷ್ಟ
🎬 Watch Now: Feature Video
ಬೆಳಗಾವಿ: ನಗರದ ಕಾಂಗ್ಲಿ ಬೀದಿಯಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಇಂದು ಸಂಭವಿಸಿದೆ. ಬೆಳಗಾವಿ ನಗರದ ಕೇಂದ್ರ ಭಾಗದ ಕಂಗ್ಲಿ ಗಲ್ಲಿಯಲ್ಲಿರುವ ಠಾಕೂರ್ ಕುಟುಂಬದ ಹಳೆಯ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡದಲ್ಲಿ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಮನೆಯಿಂದ ಬೇರೊಂದು ಸುರಕ್ಷಿತ ಸ್ಥಳಕ್ಕೆ ತೆರಳಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿ ಕೆನ್ನಾಲಿಗೆ ಹೆಚ್ಚಾಗುತ್ತಿದ್ದಂತೆ ಕಟ್ಟಡದ ಕೆಳಗೆ ಇರುವ ಎರಡು ಪೋಟೋ ಸ್ಟುಡಿಯೋಗಳಿಗೆ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಪಕ್ಕದ ದೇವಸ್ಥಾನ ಹಾಗೂ ಒಂದು ಮನೆಗೂ ಹಾನಿ ಸಂಭವಿಸಿದೆ.
ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ವಿವಿಯಲ್ಲಿ ಅಗ್ನಿ ಅವಘಡ: ಅಪರೂಪದ ಗಿಡ-ಮರಗಳು ಸುಟ್ಟು ಕರಕಲು