Hubli flyover : ವಿದ್ಯುತ್ ತಂತಿಯ ಮೇಲೆ ಮಗುಚಿ ಬಿದ್ದ ಕ್ರೇನ್; ತಪ್ಪಿದ ಭಾರಿ ಅನಾಹುತ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಫ್ಲೈಓವರ್ ನಿರ್ಮಾಣಗೊಳ್ಳುತ್ತಿದೆ. ಈ ಫ್ಲೈಓವರ್ ಕಾಮಗಾರಿಯ ಆರಂಭದಲ್ಲೇ ಅವಾಂತರವೊಂದು ಸೃಷ್ಟಿಯಾಗಿದೆ. ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿಯ ಮೇಲೆ ಆಯತಪ್ಪಿ ಹೊರಳಿ ಕ್ರೇನ್ ಬಿದ್ದಿದೆ.
ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕೆ ಅಪ್ಪಳಿಸಿವೆ. ಜೊತೆಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಎರಡು ಬೈಕ್ ಸಂಪೂರ್ಣ ಜಖಂಗೊಂಡಿವೆ. ಈ ವೇಳೆ ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಹುಬ್ಬಳ್ಳಿ ಹಳೇ ಕೋರ್ಟ್ ವೃತ್ತದಿಂದ ಕೇಶ್ವಾಪುರ ಸರ್ಕಲ್‌ವರೆಗಿನ ರಸ್ತೆ ಸಂಚಾರ ಬಂದ್ ಆದ ಘಟನೆ ನಡೆದಿದೆ. ಮತ್ತೊಂದೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದ ಕಾರಣ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಒಂದು ವೇಳೆ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಇದ್ದಿದ್ದರೆ ಭಾರಿ ಅನುಹುತ ನಗರದಲ್ಲಿ ನಡೆಯುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿದ ಕಾರಿಂದ ಬೈಕ್, ಬಸ್ ನಿಲ್ದಾಣಕ್ಕೆ ಡಿಕ್ಕಿ; ದ್ವಿಚಕ್ರವಾಹನ ಸವಾರ ಪವಾಡಸದೃಶ್ಯ ಪಾರು