ಮಲೆಮಹದೇಶ್ವರ ಬೆಟ್ಟ: 28 ದಿನದಲ್ಲಿ ₹2 ಕೋಟಿಗೂ ಅಧಿಕ ಹಣ ಸಂಗ್ರಹ-ವಿಡಿಯೋ
🎬 Watch Now: Feature Video
ಚಾಮರಾಜನಗರ: ನಾಡಿನ ಪ್ರಸಿದ್ಧ ಹಿಂದೂ ಯಾತ್ರಾಸ್ಥಳಗಳಲ್ಲಿ ಒಂದಾಗಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು. ಕಳೆದ 28 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 2.10 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಬೆಟ್ಟದ ಬಸ್ ನಿಲ್ದಾಣ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬೆಳಿಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.
ಆ ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭವಾಯಿತು. ಎಣಿಕೆ ಕಾರ್ಯವು ಸಂಜೆ 7.30ರ ಗಂಟೆಯವರೆಗೂ ನಡೆಯಿತು. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,10,78,014 ರೂ. ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿ ಮೌಲ್ಯಮಾಪಕರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅವುಗಳನ್ನು ಶೇಖರಿಸಿಡಲಾಗಿದೆ. ಇನ್ನು, ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಎಷ್ಟೇ ಅರಿವು ಮೂಡಿಸಿದರೂ ಸಹ ಚಲಾವಣೆಯಲ್ಲಿಲ್ಲದ 2 ಸಾವಿರ ಮುಖಬೆಲೆಯ 32 ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ.
ಇದನ್ನೂ ಓದಿ: ಮಲೆ ಮಾದಪ್ಪನ ಹುಂಡಿ ಎಣಿಕೆ: 39 ದಿನಗಳಲ್ಲಿ 2.28 ಕೋಟಿ ರೂ. ಕಾಣಿಕೆ ಸಂಗ್ರಹ