ಚಿಕ್ಕೋಡಿ: ಹೈಡ್ರಾಲಿಕ್ ಕ್ರೈನ್ ಪಲ್ಟಿಯಾಗಿ ಚಾಲಕ ಸಾವು - ಈಟಿವಿ ಭಾರತ ಕನ್ನಡ
🎬 Watch Now: Feature Video
ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿದ ಹೈಡ್ರಾಲಿಕ್ ಕ್ರೇನ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದ ಘಟ್ಟಿ ಬಸವಣ್ಣ ದೇವಸ್ಥಾನದ ಸಮೀಪದ ಚಿಕ್ಕೋಡಿ- ಹುಕ್ಕೇರಿ ರಾಜ್ಯ ಹೆದ್ದಾರಿ ಬಳಿ ಈ ದುರ್ಘಟನೆ ಸಂಭವಿಸಿದೆ.
ಸತ್ಯಪ್ಪ ಖದ್ದಿ (27) ಸ್ಥಳದಲ್ಲೇ ಮೃತಪಟ್ಟ ಯುವಕನಾಗಿದ್ದು, ಚಿಕ್ಕೋಡಿ ತಾಲೂಕಿನ ಜೋಡಕುರಳಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಇಬ್ಬರು ಗಾಯಗೊಂಡಿದ್ದಾರೆ. ವಿಜಯ್ ನಿಕಮ್ ಮತ್ತು ವಿಕಾಸ್ ಪವಾರ್ ಎಂಬುವರು ಗಾಯಗೊಂಡಿದ್ದು, ಇವರನ್ನು ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿ ವೇಳೆ ವಿದ್ಯುತ್ ತಂತಿಯ ಮೇಲೆ ಆಯತಪ್ಪಿ ಕ್ರೇನ್ ಬಿದ್ದಿತ್ತು. ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕರುಳಿದ್ದವು. ಹಾಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಎರಡು ಬೈಕ್ ಸಂಪೂರ್ಣ ಜಖಂಗೊಂಡಿದ್ದವು. ಈ ವೇಳೆ ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು.
ಇದನ್ನೂ ಓದಿ: Hubli flyover : ವಿದ್ಯುತ್ ತಂತಿಯ ಮೇಲೆ ಮಗುಚಿ ಬಿದ್ದ ಕ್ರೇನ್; ತಪ್ಪಿದ ಭಾರಿ ಅನಾಹುತ