ಬಿಜೆಪಿ ಸೋಲಿನ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ : ಸಿಎಂ ಬೊಮ್ಮಾಯಿ
🎬 Watch Now: Feature Video
ಹಾವೇರಿ : ಜನರ ತೀರ್ಪನ್ನು ಅತ್ಯಂತ ಗೌರವಪೂರ್ವಕವಾಗಿ ಸ್ವೀಕರಿಸುತ್ತೇನೆ. ವಿಧಾನಸಭೆ ಚುನಾವಣೆಯಲ್ಲಿನ ಬಿಜೆಪಿ ಸೋಲಿನ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕ್ಷೇತ್ರದ ಮತ ಎಣಿಕೆ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೋಲಿಗೆ ಹಲವಾರು ಕಾರಣಗಳಿವೆ. ನಮ್ಮ ಸೋಲಿನ ಬಗ್ಗೆ ವಿಶ್ಲೇಷಣೆ ಮಾಡಬೇಕಿದೆ. ಸೋಲಿನ ಬಗ್ಗೆ ಪ್ರತಿ ಕ್ಷೇತ್ರದಲ್ಲಿ ಕೂಲಂಕಷವಾಗಿ ಪರಿಶೀಲನೆ ಮಾಡಿ ನೋಡುತ್ತೇವೆ. ಏನೆಲ್ಲ ಕೊರತೆಗಳಾಗಿವೆ ಅವುಗಳನ್ನು ನಿವಾರಿಸಿ ಮತ್ತೆ ಪಕ್ಷವನ್ನು ಸಂಘಟನೆ ಮಾಡುತ್ತೇವೆ. ಬಿಜೆಪಿ ಮತ್ತೆ ಪುಟೆದೇಳುವ ಪಕ್ಷ. ಮುಂದಿನ ಲೋಕಸಭೆ ಚುನಾವಣೆಗೆ ಬೇಕಾದ ತಯಾರಿಗಳನ್ನು ಮಾಡುತ್ತೇವೆ. ಜನರಿಗೆ ಮತ್ತೊಮ್ಮೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಶಿಗ್ಗಾಂವಿಯಲ್ಲಿ ಗೆಲ್ಲಲು ಕಾರಣರಾದ ಮತದಾರರಿಗೆ ಕೋಟಿ ಕೋಟಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕೈ ಹಿಡಿದಿದ್ದಾರೆ. ನಿರಂತರವಾಗಿ ನಾಲ್ಕನೆ ಬಾರಿಯೂ ನನ್ನನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಹೇಳಿದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ಗೆಲುವಿಗೆ ಕಾರಣ ಅವರೇ ಹೇಳಬೇಕು. ನನ್ನ ಪ್ರಕಾರ ಕಾಂಗ್ರೆಸ್ನವರು ಬಹಳ ವ್ಯವಸ್ಥಿತವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇಂದು ಬೆಂಗಳೂರಿಗೆ ತೆರಳುವುದಾಗಿ ಇದೇ ವೇಳೆ ಹೇಳಿದರು.
ಇದನ್ನೂ ಓದಿ :'ಜನ ಮತಹಾಕಿ ವಿಶ್ವಾಸ ತೋರಿಸಿದ್ದಾರೆ, ಭರವಸೆಗಳನ್ನು ಬೇಗ ಈಡೇರಿಸುವ ಜವಾಬ್ದಾರಿ ಇದೆ'