ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದ ಪ್ರಮುಖ ಕ್ಷಣಗಳು.. Videoದಲ್ಲಿ ನೋಡಿ!
🎬 Watch Now: Feature Video
ವಾಷಿಂಗ್ಟನ್( ಅಮೆರಿಕ) : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅಮೆರಿಕ ಅಧ್ಯಕ್ಷರಿಂದ ವಿಶೇಷ ಆಹ್ವಾನ ಪಡೆದ ಮೋದಿ, ಜೂನ್ 21 ರಿಂದ 24 ರ ವರೆಗೆ ಬಿಡುವಿಲ್ಲದೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಾರತ- ಅಮೆರಿಕ ಸ್ನೇಹ ಇನ್ನಷ್ಟು ಎತ್ತರಕ್ಕೆ ಏರುವಲ್ಲಿ ಶ್ರಮಿಸಿದರು. ಜೂನ್ 21 ರಂದು ನ್ಯೂಯಾರ್ಕ್ನ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು. 135 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವಸಂಸ್ಥೆಯಲ್ಲಿ ನಡೆದ ಈ ಯೋಗಾಭ್ಯಾಸ ಗಿನ್ನೆಸ್ ದಾಖಲೆ ನಿರ್ಮಿಸಿದೆ.
ಯೋಗಭ್ಯಾಸದ ಬಳಿಕ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸಿ ಪಿಎಂ, ಜೂನ್ 22 ರಂದು ಶ್ವೇತಭವನದಲ್ಲಿ ವಿಧ್ಯುಕ್ತ ಸ್ವಾಗತವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೋದಿ 21 ಗನ್ ಸೆಲ್ಯೂಟ್ ಸ್ವೀಕರಿಸಿದರು. ಪ್ರಧಾನಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ, ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡಿ, ಉನ್ನತ ಮಟ್ಟದ ಮಾತುಕತೆ ನಡೆಸಿದರು.
ಅಂದು ಸಂಜೆಯೇ ಶ್ವೇತಭವನದಲ್ಲಿ ಬೈಡನ್ ಮತ್ತು ಜಿಲ್ ಬೈಡನ್ ದಂಪತಿ ಪಿಎಂ ನರೇಂದ್ರ ಮೋದಿ ಅವರಿಗೆ ಔತಣಕೂಟವನ್ನು ಆಯೋಜಿಸಿದ್ದರು. ಮುಖೇಶ್ ಅಂಬಾನಿ, ಆನಂದ್ ಮಹೀಂದ್ರಾ, ಆ್ಯಪಲ್ ಸಿಇಒ ಟಿಮ್ ಕುಕ್, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಗೂಗಲ್ ಸಿಇಒ ಸುಂದರ್ ಪಿಚೈ ಮುಂತಾದವರು ಭೋಜನಕೂಟದಲ್ಲಿ ಭಾಗವಹಿಸಿದ್ದರು. ಬಳಿಕ. ಅದೇ ದಿನದಂದು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಸ್ಪೀಕರ್ ಕೆವಿನ್ ಮೆಕಾರ್ಥಿ ಮತ್ತು ಸೆನೆಟ್‌ನ ಸ್ಪೀಕರ್ ಚಾರ್ಲ್ಸ್ ಶುಮರ್ ಸೇರಿದಂತೆ ಅಮೆರಿಕ ಕಾಂಗ್ರೆಸ್ ನಾಯಕರ ಆಹ್ವಾನದ ಮೇರೆಗೆ ಮೋದಿಯವರು ಅಮೆರಿಕ ಕಾಂಗ್ರೆಸ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಮೋದಿಗೆ ಧನ್ಯವಾದ ಅರ್ಪಿಸಿದರು.
ಬಳಿಕ, ಪ್ರಮುಖ ಸಿಇಒಗಳು ಹಾಗೂ ವೃತ್ತಿಪರರೊಂದಿಗೆ ಸಂವಾದ ನಡೆಸಿದರು. ಜೊತೆಗೆ, ಭಾರತೀಯ ಅನಿವಾಸಿ ಸದಸ್ಯರನ್ನೂ ಭೇಟಿಯಾದರು. ರೊನಾಲ್ಡ್ ರೇಗನ್ ಕಟ್ಟಡದಲ್ಲಿ ಭಾರತೀಯ ಅನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಪಾಲುದಾರಿಕೆಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನೂ ಓದಿ : ನನಗೆ ಮೋದಿಯವರ ಬಗ್ಗೆ ತುಂಬಾ ಹೆಮ್ಮೆ ಇದೆ : ಅಮೆರಿಕ ಸಂಸದ ಕನ್ನಡಿಗ ಶ್ರೀ ಥಾನೇದಾರ್ ಸಂತಸ.. ಯಾರೀ ಶ್ರೀ