ಯುವತಿಯ ಮೊಬೈಲ್ ಕಸಿದು ಪರಾರಿಯಾದ ದುಷ್ಕರ್ಮಿಗಳು.. ವಿಡಿಯೋ
🎬 Watch Now: Feature Video
ಇಂದೋರ್ (ಮಧ್ಯ ಪ್ರದೇಶ) : ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕಿಯ ಮೊಬೈಲ್ಅನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಲಸುಡಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯನ್ನು ನೆಲದ ಮೇಲೆ ಬಿದ್ದು ಎಳೆದೊಯ್ಯುವ ರೀತಿಯಲ್ಲಿ ದುಷ್ಕರ್ಮಿಗಳು ಮೊಬೈಲ್ ಕಸಿದುಕೊಂಡಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ, ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳಿಬ್ಬರ ಬಂಧನ : ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳ ಆಧಾರದ ಮೇಲೆ ಪೊಲೀಸರು ಇಬ್ಬರು ಆರೋಪಿಗಳಾದ ಅರ್ಪಿತ್ ಮತ್ತು ಪಿಯೂಷ್ ನನ್ನು ಬಂಧಿಸಿ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಾಂಜಲಿ ಸಿಂಗ್ ಬಘೇಲ್ ಶಹದೋಲ್ ಜಿಲ್ಲೆಯ ನಿವಾಸಿ. ಅವರು ಇಂದೋರ್‌ನ ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಆಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದಾಗ ಹುಡುಗಿ ತನ್ನ ಕೈಯಿಂದ ಮೊಬೈಲ್ ಅನ್ನು ಬಿಡಲಿಲ್ಲ ಮತ್ತು ಈ ವೇಳೆ ದುಷ್ಕರ್ಮಿಗಳು ಯುವತಿಯನ್ನು ಮೊಬೈಲ್ನೊಂದಿಗೆ ಹಲವಾರು ಮೀಟರ್ಗಳಷ್ಟು ದೂರ ಎಳೆದೊಯ್ದಿದ್ದಾರೆ. ಇದರಿಂದಾಗಿ ಯುವತಿ ಗಾಯಗೊಂಡಿದ್ದಾರೆ. ಇದಾದ ಬಳಿಕ ನಡೆದ ಘಟನೆಯ ಬಗ್ಗೆ ಶಹದೋಲ್‌ನಲ್ಲಿ ನೆಲೆಸಿರುವ ತನ್ನ ಪೋಷಕರಿಗೆ ಮಾಹಿತಿ ತಿಳಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಕಾಲ್ನಡಿಗೆಯಲ್ಲಿ ಬಸ್ ಹಿಡಿಯಲು ಹೋಗುತ್ತಿದ್ದರು. ಅದೇ ಸಮಯದಲ್ಲಿ ಬಂದ ದುಷ್ಕರ್ಮಿಗಳು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಡಿಸಿಪಿ ಮನೀಶ್ ಅಗರ್ವಾಲ್ ತಿಳಿಸಿದ್ದಾರೆ.