ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಪ್ರಹ್ಲಾದ್ ಜೋಶಿ ಚಾಲನೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಹುಬ್ಬಳ್ಳಿ: ನಗರದ ಶ್ರೀ ವೆಂಕಟೇಶ್ವರ ದೇವಸ್ಥಾನ ಎದುರಿನ ಮೈದಾನದಲ್ಲಿಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. ಎರಡು ದಿನಗಳ ಕಾಲ ನಡೆಯಲಿರುವ ಈ ಉತ್ಸವ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ಆಯೋಜನೆ ಮಾಡಲಾಗಿದ್ದು, ದೇಶ ವಿದೇಶಗಳಿಂದ ಗಾಳಿಪಟ ಪಟುಗಳು ಉತ್ಸವದಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಕಲಾವಿದರು ಒಂದೇ ವೇದಿಕೆಯಲ್ಲಿ ಜನರನ್ನು ರಂಜಿಸುತ್ತಿದ್ದಾರೆ.
ದೇಶಿ ಕ್ರೀಡಾ ಸ್ಪರ್ಧೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗೆ ಕ್ರೀಡೆ, ಸಂಗೀತ ಸ್ಪರ್ಧೆ, ಆಹಾರ ಉತ್ಸವ ಹಾಗೂ ಪ್ರದರ್ಶನ ಕೂಡ ಉತ್ಸವದಲ್ಲಿ ಆಯೋಜನೆ ಮಾಡಲಾಗಿದೆ. ಅಮೆರಿಕ, ಆಸ್ಟ್ರೇಲಿಯಾ, ಮಲೇಷ್ಯಾ, ಬೆಲ್ಜಿಯಂ, ಕೆನಡ, ಟರ್ಕಿ ಸೇರಿದಂತೆ 15 ರಾಷ್ಟ್ರಗಳ ಗಾಳಿ ಪಟ ಸ್ಪರ್ಧಿಗಳು, ಭಾರತದ ಗುಜರಾತ್, ಮಹಾರಾಷ್ಟ್ರದ ಸ್ಪರ್ಧಿಗಳ ಈ ಉತ್ಸವದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಭೇಟಿ ಕೊಟ್ಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ