ಜಗದೀಶ್ ಶೆಟ್ಟರ್ ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ- ವಿಡಿಯೋ - Karnataka Election
🎬 Watch Now: Feature Video
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ತೊರೆದು 'ಕೈ' ಹಿಡಿದ ಬಳಿಕ ಕ್ಷೇತ್ರಕ್ಕೆ ಆಗಮಿಸಿರುವ ಶೆಟ್ಟರ್ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ತಮ್ಮ ನಿವಾಸಕ್ಕೆ ಆಗಮಿಸಿದ ಜಗದೀಶ್ ಶೆಟ್ಟರ್ ಅವರನ್ನು ಪತ್ನಿ ಶಿಲ್ಪಾ ಶೆಟ್ಟರ್ ತಬ್ಬಿಕೊಂಡು ಕಣ್ಣೀರು ಹಾಕಿದರು. ಶೆಟ್ಟರ್ ಕೂಡ ಭಾವುಕರಾದರು.
ಕಣ್ಣೀರು ಹಾಕಿದ ಶಿಲ್ಪಾ ಶೆಟ್ಟರ್ ಅವರನ್ನು ಮಹಿಳಾ ಕಾರ್ಯಕರ್ತೆಯರು ಮನೆಯೊಳಗೆ ಕರೆದೊಯ್ದು ಸಮಾಧಾನಪಡಿಸಿದರು. ನಾವೆಲ್ಲ ನಿಮ್ಮ ಜೊತೆಗಿದ್ದೇವೆ, ಶೆಟ್ಟರ್ ಅವರನ್ನು ಗೆಲ್ಲಿಸಿ ತರುತ್ತೇವೆ ಎಂದು ಧೈರ್ಯ ತುಂಬಿದರು. ಟಿಕೆಟ್ ನೀಡಲು ನಿರಾಕರಿಸಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಮಲ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದು, ಅಭಿಮಾನಿಗಳು ಅದ್ಧೂರಿಯಾಗಿಯೇ ಸ್ವಾಗತ ಕೋರಿದ್ದು ಕಂಡುಬಂತು.
ಇದನ್ನೂ ಓದಿ: ದೇವೇಗೌಡರ ಆಶೀರ್ವಾದ ಪಡೆದ ಬಳಿಕ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ