ಬಿಜೆಪಿಯವರು ಹಣ ಹಂಚಿದ್ದು ನನ್ನ ಸೋಲಿಗೆ ಕಾರಣ: ಜಗದೀಶ್ ಶೆಟ್ಟರ್ - ಸೋಲಿನ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ
🎬 Watch Now: Feature Video
ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿನ ಬಗ್ಗೆ ಕಾಂಗ್ರೆಸ್ ಮುಖಂಡ ಮತ್ತು ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, "ನನ್ನ ಸೋಲಿಗೆ ಬಿಜೆಪಿಯವರ ಹಣದ ಶಕ್ತಿ ಬಹಳ ಮುಖ್ಯ ಪಾತ್ರ ವಹಿಸಿದೆ" ಎಂದು ಹೇಳಿದರು.
ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಸತತ ಆರು ಬಾರಿ ಗೆದ್ದು ಬೀಗಿದ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಇದೀಗ ಕ್ಷೇತ್ರದಲ್ಲಿ ಸೋಲು ಕಂಡಿದ್ದು, ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಹಣ ಪ್ರಮುಖ ಪಾತ್ರ ವಹಿಸಿದೆ, ಮತದಾರರಿಗೆ ಬಿಜೆಪಿ ವತಿಯಿಂದ ಹಣ ಹಂಚಲಾಗಿದೆ. ಕಾಂಗ್ರೆಸ್ ಪಕ್ಷ ಬಹುಮತ ಪಡೆಯವ ಬಗ್ಗೆ ಅವರಿಗೆ ತಿಳಿದಿತ್ತು. ಮೋದಿ, ನಡ್ಡಾ, ಅಮಿತ್ ಶಾ ಎಲ್ಲರೂ ನನ್ನ ಟಾರ್ಗೆಟ್ ಮಾಡಿದರು ಎಂದರು.
ಇದನ್ನೂ ಓದಿ : ದೇಶದ ಗಮನ ಸೆಳೆದ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ: ಜಾತಿ ಲೆಕ್ಕಾಚಾರ, ಬೆಟ್ಟಿಂಗ್ ಭರಾಟೆ ಜೋರು