ಕಾಂಗ್ರೆಸ್ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ಖಚಿತ: ಶಾಮನೂರು ಭವಿಷ್ಯ - ಅಖಿಲ ಭಾರತ ವೀರಶೈವ ಮಹಾಸಭಾ
🎬 Watch Now: Feature Video
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಪಕ್ಷಕ್ಕೆ ಬಹಳಷ್ಟು ಅನುಕೂಲವಾಗಿದೆ. ಪಕ್ಷದ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರಾದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರಿಂದ ಪಕ್ಷಕ್ಕೆ ಚುನಾವಣೆ ಸಂದರ್ಭದಲ್ಲಿ ಬಹಳಷ್ಟು ಅನುಕೂಲವಾಗಿದೆ. ಶೆಟ್ಟರ್ ಅವರಿಗೆ ಪಕ್ಷದ ಹೈಕಮಾಂಡ್ ಗೌರವಯುತವಾದ ಹುದ್ದೆ ನೀಡುವ ವಿಶ್ವಾಸವಿದೆ ಎಂದು 'ಈಟಿವಿ ಭಾರತ್'ಗೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಆಗ್ರಹಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ 92 ನೇ ವಯಸ್ಸಿನಲ್ಲಿ ಸ್ಪರ್ಧೆ ಮಾಡಿ ಗೆದ್ದಿರುವ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿರುವ ಶಾಮನೂರು ಶಿವಶಂಕರಪ್ಪನವರು, ಬರುವ ವಿಧಾನಸಭೆ ಚುನಾವಣೆಯಲ್ಲಿಯೂ 97ರ ವಯಸ್ಸಿನಲ್ಲಿಯೂ ಸ್ಪರ್ಧೆ ಮಾಡುವ ಅಭಿಲಾಷೆ ಹೊಂದಿದ್ದಾರೆ.
ಕಾಂಗ್ರೆಸ್ ಪಕ್ಷವು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಲು ಟಿಕೆಟ್ ನೀಡಿತು. ಪಕ್ಷ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಕ್ಷೇತ್ರದಲ್ಲಿ ಬಹುತೇಕ ಚುನಾವಣೆ ಪ್ರಚಾರ ಪೂರ್ಣಗೊಳಿಸಲಾಗಿತ್ತು. ದೇಶದಲ್ಲಿಯೇ ಹಿರಿಯ ಶಾಸಕರಾಗಿರುವ ಬಗ್ಗೆ ಹೆಮ್ಮೆಯಿದೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ವೀರಶೈವ ಲಿಂಗಾಯತರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲು ಶಾಮನೂರು ಪಟ್ಟು