ಯಾದಗಿರಿಯಲ್ಲಿ ನಾಳೆ ಬಿಜೆಪಿ ಜನಸಂಕಲ್ಪ ಯಾತ್ರೆ : ಸಕಲ ಸಿದ್ಧತೆ - BJP janasankalpa yathra
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16684376-thumbnail-3x2-yyy.jpg)
ಯಾದಗಿರಿ: ಪಟ್ಟಣದ ಯುಕೆಪಿ ಕ್ಯಾಂಪಿನ ಆವರಣದಲ್ಲಿ ಬುಧವಾರ ನಡೆಯಲಿರುವ ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮಕ್ಕೆ ಬೃಹದಾಕಾರದ ವೇದಿಕೆ ಸಿದ್ಧಪಡಿಸಲಾಗಿದೆ. ಸುಮಾರು 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಿಜೆಪಿ ನಾಯಕರು ಹುಣಸಗಿ ಪಟ್ಟಣದ ಪರಮಣ್ಣ ಕಟ್ಟಿಮನಿ ಎಂಬ ದಲಿತರ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಲಿದ್ದಾರೆ. ಲಿಂಗಾಯತ ಸಮುದಾಯದ ಎಂ.ಎಸ್. ಚಂದಾ ಅವರ ಮನೆಯಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ರಾಜೂಗೌಡ ತಿಳಿಸಿದ್ದಾರೆ.
Last Updated : Feb 3, 2023, 8:29 PM IST