ಬೆಂಗಳೂರು: ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ನೀಡದಂತೆ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆ - ದೇವನಹಳ್ಳಿ ವಿಧಾನಸಭಾ ಕ್ಷೇತ್ರ
🎬 Watch Now: Feature Video
ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಜೆಡಿಎಸ್ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ನೀಡದಂತೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ದೇವನಹಳ್ಳಿ ಕ್ಷೇತ್ರದ ನೂರಾರು ಮಹಿಳೆಯರು ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿ, ಯಾವುದೇ ಕಾರಣಕ್ಕೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದೇವನಹಳ್ಳಿ ಜೆಡಿಎಸ್ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಬಾರದು. ಅವರ ಬದಲಿಗೆ ಸಮಾಜ ಸೇವಕ ಮಂಜುನಾಥ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಭಿತ್ತಿ ಪತ್ರ, ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಜೆಡಿಎಸ್ ಮುಖಂಡ ಮಂಜುನಾಥ್ ಅವರ ಬೆಂಬಲಿಗರು ಘೋಷಣೆ ಕೂಗಿದರು. ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲೇ ಅವರ ಹೆಸರು ಪ್ರಕಟವಾಗಿದೆ. ಆದರೂ, ಮಂಜುನಾಥ್ ಅವರಿಗೆ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದರು.
ಇದನ್ನೂ ಓದಿ : Video.. ಡೊಳ್ಳು ಬಾರಿಸಿ ಮಕ್ಕಳ ಜೊತೆ ಹೆಜ್ಜೆ ಹಾಕಿದ ಮಧು ಬಂಗಾರಪ್ಪ