ತುಮಕೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.. ಜೆಪಿ ನಡ್ಡಾ ರೋಡ್ ಶೋ - Etv Bharat Kannada
🎬 Watch Now: Feature Video
ತುಮಕೂರು: ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆ ತುಮಕೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಗರದಲ್ಲಿ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋನಲ್ಲಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಅಲ್ಲದೇ ರೋಡ್ ಶೋ ಉದ್ದಕ್ಕೂ ಪಕ್ಷದ ಬಾವುಟ ಹಿಡಿದು ಕಾರ್ಯಕರ್ತರು ಘೋಷಣೆಗಳನ್ನು ಹಾಕುತ್ತ ಸಾಗಿದ್ದಾರೆ. ರೋಡ್ ಶೋ ನಲ್ಲಿ ಜೆ ಪಿ ನಡ್ಡಾರೊಂದಿಗೆ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೇರಿದಂತೆ ಪಕ್ಷದ ನಾಯಕರು ಭಾಗಿಯಾಗಿದ್ದಾರೆ.
ಇನ್ನು ಇಂದು ತುಮಕೂರಿ ಜಿಲ್ಲೆಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ನಡ್ಡಾ ಚಾಲನೆ ನೀಡಿದ್ದಾರೆ. ವಿಜಯ ಸಂಕಲ್ಪ ಯಾತ್ರೆ ಮುಖಾಂತರ ಡಬಲ್ ಎಂಜಿನ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವ ಕಾರ್ಯವನ್ನು ಪಕ್ಷದ ನಾಯಕರು ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಜೆ ಪಿ ನಡ್ಡಾ ಚಿತ್ರದುರ್ಗದ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅದಾದ ಬಳಿಕ ತುಮಕೂರಿಗೆ ಆಗಮಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಬಂದ್: ಬಸನಗೌಡ ಪಾಟೀಲ್ ಯತ್ನಾಳ್