ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ: ಡಬಲ್ ಎಂಜಿನ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ- ಜ್ಯೋತಿರಾದಿತ್ಯ ಸಿಂಧಿಯಾ
🎬 Watch Now: Feature Video
Published : Dec 3, 2023, 11:32 AM IST
ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರಿ ಬಹುಮತದಿಂದ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವುದು ಬಹುತೇಕ ಖಚಿತವಾಗಿದೆ. ಸದ್ಯ 158 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಪಡೆದುಕೊಂಡಿದ್ದಾರೆ. ಬಹುಮತಕ್ಕೆ ಬೇಕಿರುವ 116 ಸ್ಥಾನಕ್ಕಿಂತಲೂ ಅಧಿಕ ಕ್ಷೇತ್ರಗಳಲ್ಲಿ ಕೇಸರಿ ಪಕ್ಷ ಗೆಲುವಿನತ್ತ ಮುನ್ನುಗ್ಗುತ್ತಿದೆ.
ಪಕ್ಷದ ಯಶಸ್ಸಿನ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ನಮ್ಮ ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಗಮನಿಸಿ ಜನರು ನಮಗೆ ಮತ್ತೊಮ್ಮೆ ಆಶೀರ್ವಾದ ನೀಡಿದ್ದಾರೆ. ಸಂಪೂರ್ಣ ಬಹುಮತದೊಂದಿಗೆ ಮತ್ತೆ ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಅವರ ಜನಕಲ್ಯಾಣ ಯೋಜನೆಗಳಿಂದಾಗಿ ಜನರು ಮತ್ತೊಮ್ಮೆ ಬಿಜೆಪಿಗೆ ಪೂರ್ಣ ಪ್ರಮಾಣದ ಅಧಿಕಾರ ನೀಡಲು ಮುಂದಾಗಿದ್ದಾರೆ. ಕಾಂಗ್ರೆಸ್ನ ಯಾವುದೇ ತಂತ್ರಗಳು ಜನರ ಪ್ರೀತಿಯ ಮುಂದೆ ನಿಲ್ಲುವುದಿಲ್ಲ. ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಬಿಜೆಪಿ ವಿರುದ್ಧ ಎಷ್ಟೇ ಆರೋಪ ಮಾಡಿದರೂ, ಅವು ಜನರ ಮತದ ಮುಂದೆ ನಿಲ್ಲುವುದಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಕೋರುವೆ ಎಂದು ಛೇಡಿಸಿದರು.
ಇದನ್ನೂ ಓದಿ: ನಾಲ್ಕು ರಾಜ್ಯಗಳ ವಿಧಾನಸಭೆ ಫಲಿತಾಂಶ: ಘಟಾನುಘಟಿ ನಾಯಕರ ಮುನ್ನಡೆ - ಹಿನ್ನಡೆ ನೋಡಿ