'ಪಕ್ಷದ ಉತ್ಸವವಾಗಿ ಕದಂಬೋತ್ಸವ': ಸಿಎಂ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಪ್ರತಿಭಟನೆ - ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
🎬 Watch Now: Feature Video
ಕಾರವಾರ (ಉತ್ತರ ಕನ್ನಡ) : ಪಕ್ಷಾತೀತವಾಗಿ ನಡೆಸಬೇಕಾದ ಕದಂಬೋತ್ಸವವನ್ನು ಬಿಜೆಪಿ ಉತ್ಸವವನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಆಗಮಿಸುತ್ತಿದ್ದ ರಸ್ತೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಕಾರು ತಡೆದು ಪ್ರತಿಭಟನೆ ನಡೆಸಿದರು. ಕೆಲಕಾಲ ಸಿಎಂ ಸಂಚಾರಕ್ಕೆ ಅಡ್ಡಿಯಾದ ಘಟನೆ ಬನವಾಸಿಯಲ್ಲಿ ನಡೆದಿದೆ.
ಬನವಾಸಿಯಲ್ಲಿ ಆಯೋಜಿಸಲಾಗಿರುವ ಕದಂಬೋತ್ಸವ ಹಾಗೂ ಕೆರೆ ತುಂಬಿಸುವ ಯೋಜನೆ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದರು. ಅದೇ ರಸ್ತೆಯಲ್ಲಿಯೇ ಮಾಜಿ ಶಾಸಕ ವಿ.ಎಸ್.ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಈ ಕುರಿತು ಮಾತನಾಡಿದ ವಿ.ಎಸ್.ಪಾಟೀಲ್, ಕದಂಬೋತ್ಸವವನ್ನು ಬಿಜೆಪಿ ಪಕ್ಷದ ಉತ್ಸವವನ್ನಾಗಿ ಮಾಡುತ್ತಿದೆ. ಕೇವಲ ಪಕ್ಷದ ಕಾರ್ಯಕರ್ತರನ್ನು ಆಹ್ವಾನಿಸಿ ಸಚಿವರು ಬಿಜೆಪಿ ಚಿಹ್ನೆಯಿರುವ ಟೀ ಶರ್ಟ್ ಹಂಚಿ ಪಕ್ಷದ ಉತ್ಸವ ಮಾಡುತ್ತಿದ್ದಾರೆ ಎಂದು ಹೇಳಿದರು.
ಕೆರೆ ತುಂಬಿಸುವ ಯೋಜನೆಗೆ ಈ ಹಿಂದೆ ಸಿದ್ದರಾಮಯ್ಯ ಅನುದಾನ ಒದಗಿಸಿದ್ದರು. ಆದರೆ ಇದೀಗ ಕರೆಂಟ್ ಹಾಗೂ ನೀರಿಲ್ಲದೇ ಇದ್ದರೂ ಏತನೀರಾವರಿ ಯೋಜನೆ ಉದ್ಘಾಟನೆ ಮಾಡಲಾಗುತ್ತಿದೆ. ಯೋಜನೆಯನ್ನು ಸಿಎಂ ಉದ್ಘಾಟನೆ ಮಾಡಿ ಅದರ ಕ್ರೆಡಿಟ್ ಪಡೆಯಲು ಶಿವರಾಮ್ ಹೆಬ್ಬಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸರ್ಕಾರಿ ನೌಕರರ ಪ್ರತಿಭಟನೆ: ಸಂಜೆ ಆಯೋಗ, ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಇತ್ಯರ್ಥ- ಸಿಎಂ