ಕಡೇ ಕಾರ್ತಿಕ ಸೋಮವಾರ ಹಿನ್ನೆಲೆ ಮಾದಪ್ಪನ ಬೆಟ್ಟದಲ್ಲಿ ಭಕ್ತ ಸಾಗರ: ಮಹಾಜ್ಯೋತಿ ಕಾಣಲು ಕಾತರ - ವಿದ್ಯುತ್ ದೀಪಲಂಕಾರ

🎬 Watch Now: Feature Video

thumbnail

By ETV Bharat Karnataka Team

Published : Dec 11, 2023, 9:11 PM IST

Updated : Dec 11, 2023, 10:24 PM IST

ಚಾಮರಾಜನಗರ : ಕಾರ್ತಿಕ ಮಾಸದ ಕಡೇ ಸೋಮವಾರದ ಹಿನ್ನೆಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಪ್ರಸಿದ್ಧ ಧಾರ್ಮಿಕ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಡೆ ಕಾರ್ತಿಕ ಸೋಮವಾರದ ನಿಮಿತ್ತ ವಿಶೇಷ ಪೂಜೆ, ಎಣ್ಣೆ ಮಜ್ಜನ ಸೇವೆ ಸಂಪ್ರದಾಯದಂತೆ ನೆರವೇರಿತು. ರಾತ್ರಿ ಮಹಾಜ್ಯೋತಿ ದರ್ಶನ ಇರಲಿದೆ. ಈ ಹಿನ್ನೆಲೆ ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದಾರೆ.

ಬೆಟ್ಟಕ್ಕೆ ಒಂದು ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ನಿನ್ನೆ ಪ್ರಾಧಿಕಾರದಿಂದ ಭಕ್ತರಿಗೆ ಕುಡಿಯುವ ನೀರು, ದಾಸೋಹ, ನೆರಳಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ತಿಕ ಕಡೇ ಸೋಮವಾರ ಪ್ರಯುಕ್ತ ದೇವಾಲಯಕ್ಕೆ ವಿವಿಧ ಬಗೆ ಫಲಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಜೊತೆಗೆ ವಿದ್ಯುತ್ ದೀಪಲಂಕಾರ ಕೂಡ ಜಗಮಗಿಸುತ್ತಿದೆ.

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ : ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಐತಿಹಾಸಿಕ ಹಾಗೂ ಪಾರಂಪರಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ದೊಡ್ಡ ಗಣೇಶನಿಗೆ ಕಡಲೆಕಾಯಿ ಅಭಿಷೇಕ ಮಾಡುವ ಮೂಲಕ ಚಾಲನೆ ನೀಡಲಾಯಿತು.‌ ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಶತಮಾನಗಳ ಇತಿಹಾಸ ಹೊಂದಿರುವ ಪರಿಷೆಯು ಪ್ರತಿವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆಯುತ್ತದೆ.

ಇದನ್ನೂ ಓದಿ: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ: ಇಂದಿನಿಂದ ಮೂರು ದಿನ ಅದ್ಧೂರಿಯಾಗಿ ನಡೆಯಲಿದೆ ಜಾತ್ರೆ

Last Updated : Dec 11, 2023, 10:24 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.